‘ಜನರನ್ನು ಉಳಿಸಿ ದೇಶವನ್ನು ಉಳಿಸಿ’ಎಂಬ ಘೋಷವಾಕ್ಯದೊಂದಿಗೆ ಶಿವಮೊಗ್ಗದಲ್ಲಿ ಮೆರವಣಿಗೆ

ಶಿವಮೊಗ್ಗ: ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಶಿವಮೊಗ್ಗದ ವತಿಯಿಂದ ‘ಜನರನ್ನು ಉಳಿಸಿ ದೇಶವನ್ನು ಉಳಿಸಿ’ ಎಂಬ ಘೋಷವಾಕ್ಯದೊಂದಿಗೆ ಇಂದು ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ, ಎಲ್ಲಾ ಶ್ರಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಹಳೆ ರೀತಿಯ ಪಿಂಚಣಿ ಯೋಜನೆ ಜಾರಿಯಾಗಬೇಕು ಎಂಬುದು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಜನರ ಹಕ್ಕುಗಳು ಮತ್ತು ಜೀವನೋಪಾಯಗಳನ್ನು ಉಳಿಸಲು ಹಾಗೂ ವಿದೇಶಿ ಕಾರ್ಪೋರೇಟ್ ಸಂಸ್ಥೆಗಳ ಓಡಿಸಲು ದೇಶದ ಅರ್ಥವ್ಯವಸ್ಥೆಯನ್ನು ಗಟ್ಟಿಗೊಳಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ, ರೈತವಿರೋಧಿ, ಜನವಿರೋಧಿ ನೀತಿಗಳನ್ನು ಅನುಸರಿಸುತ್ತಾ ಕಾರ್ಪೋರೇಟ್ ಪರವಾಗಿದೆ. ಈ ದೇಶವನ್ನು ವಿನಾಶದಿಂದ
ತಪ್ಪಿಸಬೇಕಾಗಿದೆ. ಏರುತ್ತಿರುವ ಬೆಲೆ ಇಳಿಯಬೇಕು. ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ರಕ್ಷಣೆ ಮತ್ತು ವಿಮಾ ಸೌಲಭ್ಯ ಸಿಗಬೇಕು ಎಂದು ಆಗ್ರಹಿಸಿದರು.

ಅಕ್ಷರ ದಾಸೋಹ ನೌಕರರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಕೇಂದ್ರ ಸರ್ಕಾರ ಕಡಿತ ಮಾಡಿರುವ ಶೇ. 40ರ ಅನುದಾನ ನೀಡಬೇಕು. ಕನಿಷ್ಠ 24 ಸಾವಿರ ವೇತನ ನೀಡಬೇಕು. ಅಂಗನವಾಡಿಗಳಲ್ಲಿ ಎಲ್.ಕೆ.ಜಿ. ಯು.ಕೆ.ಜಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

Sneha Gowda

Recent Posts

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

4 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

30 mins ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

42 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

1 hour ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

1 hour ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

2 hours ago