News Karnataka Kannada
Thursday, May 09 2024
ಶಿವಮೊಗ್ಗ

ನಕಲಿ ವೈದ್ಯನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Industrialist's suicide case: Main accused arrested
Photo Credit :

ಶಿವಮೊಗ್ಗ: ನಕಲಿ ಪರವಾನಿಗೆಯನ್ನು ಸೃಷ್ಟಿಸಿಕೊಂಡು ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿ ಹಕೀಂ ಅಲಿಯಾಸ್ ಡಾ.ಅಮೀರ್ ಜಾನ್‍ಗೆ 2ನೇ ಜೆಎಂಎಫ್‍ಸಿ ನ್ಯಾಯಾಲಯ 3 ವರ್ಷ ಕಾರಾಗೃಹವಾಸ ಮತ್ತು 15 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.

ನಗರದ ದುರ್ಗಾಮೃತ ಲಾಡ್ಜ್ ನ ರೂಂ ನಂಬರ್ 106 ರಲ್ಲಿ ಯಾವುದೇ ಪರವಾನಿಗೆ ಹೊಂದದೇ ನಕಲಿ ಪರವಾನಿಗೆಯನ್ನು ಸೃಷ್ಟಿಸಿಕೊಂಡು ವೈದ್ಯ ವೃತ್ತಿ ನಡೆಸುತ್ತಿರುವುದು ದಾಳಿಯಿಂದ ಬೆಳಕಿಗೆ ಬಂದಿತ್ತು.

ನಕಲಿ ವೈದ್ಯ ವೃತ್ತಿಗೆ ಬಳಸಿದ ಔಷಧಿಗಳು, ಬೋರ್ಡ್, ಇತರೆ ವಸ್ತುಗಳನ್ನು ವಶಪಡಿಸಿಕೊಂಡು ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿ, ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

2ನೇ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಆರ್.ಸನ್ಮತಿ ಜ.25 ರಂದು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ವಿಧಿಸಿದ್ದಾರೆ.

ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಜಿ.ಕೆ.ಕಿರಣ್‍ಕುಮಾರ್ ಪ್ರಕರಣದ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು