ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಸಿಬಿಐ ತನಿಖೆಗೆ ಆಗ್ರಹ

ಶಿವಮೊಗ್ಗ:ನಿರಂತರ ಜ್ಯೋತಿ ಯೋಜನೆಯಲ್ಲಿ ಸುಮಾರು 50 ಕೋಟಿ ರೂ. ಅವ್ಯವಹಾರವಾಗಿದ್ದು, ಅದನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕೆ.ಬಿ. ಪ್ರಸನ್ನಕುಮಾರ್ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಬಹುಮುಖ್ಯವಾದ ಯೋಜನೆಯಾದ ನಿರಂತರ ಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಸುಮಾರು 40 ರಿಂದ 50 ಕೋಟಿ ರೂ. ಅವ್ಯವಹಾರ ನಡೆದಿದೆ. ಭ್ರಷ್ಟಾಚಾರ ನಡೆದಿದೆ ಎಂದು ಸಚಿವರೇ ಹೇಳಿದ್ದಾರೆ. ಅವ್ಯವಹಾರವಾಗಿದ್ದನ್ನು ಅಧಿಕಾರಿಗಳ ಸಭೆಯಲ್ಲಿ ಸಚಿವರು ಗಮನಕ್ಕೆ ತಂದಿದ್ದು ಸರಿ ಮಾಡಿಕೊಳ್ಳಿ ಎಂದಿದ್ದಾರೆ. ಈ ಸರಿಮಾಡಿಕೊಳ್ಳಿ ಎಂಬುದರ ಅರ್ಥವೇನು ಎಂದು ಪ್ರಶ್ನಿಸಿದರು. ಸರ್ಕಾರ ನಿರಂತರ ಜ್ಯೋತಿ ಯೋಜನೆಗಾಗಿ ಜಿಲ್ಲೆಗೆ 210 ಕೋಟಿ ರೂ. ಬಿಡುಗಡೆ ಮಾಡಿದೆ.

ಈಗಾಗಲೇ ಇದರಲ್ಲಿ 140 ಕೋಟಿ ರೂ. ಗುತ್ತಿಗೆದಾರರಿಗೆ ಪಾವತಿ ಮಾಡಲಾಗಿದೆ. ಇಂಧನ ಸಚಿವರು ಬಂದಾಗ 5 ಕೋಟಿ ರೂ. ಹೆಚ್ಚುವರಿಯಾಗಿ ನೀಡಲಾಗಿದೆ ಎಂದು ಅವರೇ ಹೇಳಿದ್ದಾರೆ. ಅವರೂ ಕೂಡ ಸರಿ ಮಾಡಿಕೊಳ್ಳಿ ಎಂದಿದ್ದಾರೆ ಎಂದು ವ್ಯಂಗ್ಯವಾಡಿದರು.ಜಿಲ್ಲಾ ಉಸ್ತುವಾರಿ ಸಚಿವರು ಕರೆದಿದ್ದ ಸಭೆಯಲ್ಲಿ 12.21 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂಬ ಮಾತುಗಳು ಅಧಿಕಾರಿಗಳಿಂದಲೇ ಕೇಳಿಬಂದಿದ್ದವು. ಕಂಬಗಳ ಅಳವಡಿಕೆಯಲ್ಲಿ ಬಹುದೊಡ್ಡ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆದಿದೆ. ಒಟ್ಟಾರೆ, ಸುಮಾರು 50 ಹಗರಣವಾದ ಇದನ್ನು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣವೇ ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಈ ಆರೋಪಗಳು ಅವರನ್ನು ಸುತ್ತಿಕೊಳ್ಳುತ್ತವೆ ಎಂದರು.

ಇದಲ್ಲದೇ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೂಡ ಭ್ರಷ್ಟಾಚಾರ ನಡೆದಿದೆ. ಕೇಬಲ್ ಅಳವಡಿಕೆಯಲ್ಲಿ 105 ಕೋಟಿ ರೂ. ಖರ್ಚಾಗಿದೆ ಎಂದು ಹೇಳಲಾಗುತ್ತಿದೆ. ಇದು ಕೂಡ ತನಿಖೆಯಾಗಬೇಕು. ದೇವಕಾತಿಕೊಪ್ಪದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಸಬ್ ಸ್ಟೇಷನ್ ಕೂಡ ಅವೈಜ್ಞಾನಿಕವಾದ ರೀತಿಯಲ್ಲಿ ಅಳವಡಿಸಲಾಗಿದೆ. ಇದರ ಬಗ್ಗೆ ತನಿಖೆಯಾಗಬೇಕು ಎಂದರು.ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್.ಕೆ. ಮರಿಯಪ್ಪ, ಶ್ಯಾಂಸುಂದರ್, ಎಸ್.ಟಿ. ಹಾಲಪ್ಪ, ಶಿವಾನಂದ್, ದೀಪಕ್ ಸಿಂಗ್, ಶಿವಣ್ಣ, ಬಾಬು ಮೊದಲಾದವರಿದ್ದರು.

Swathi MG

Recent Posts

ಮತದಾರನಿಗೆ ಹೊಡೆಯಲು ಹೋಗಿ ಕಪಾಳಕ್ಕೆ ಹೊಡಿಸಿಕೊಂಡ ಶಾಸಕ; ವಿಡಿಯೋ ವೈರಲ್‌

ಕಳೆ ದಿನ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಿತು. ಈ ವೇಳೆ ಆಡಳಿತಾರೂಢ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ಮತದಾರನ ಮೇಲೆ ಹಲ್ಲೆ…

8 mins ago

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ…

12 mins ago

ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೆಚ್‌.ಡಿ ರೇವಣ್ಣ

ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ನೇರವಾಗಿ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ತಂದೆ-ತಾಯಿ ಜೊತೆ…

27 mins ago

ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಕದಲ್ಲಿ ಕುಳಿತಿರುವ ಗಡ್ಡಧಾರಿ ಯಾರು?

ಪ್ರಧಾನಿ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೋದಿ ನಾಮಿನೇಶನ್‌ ಮಾಡುವ…

28 mins ago

ಮೋದಿಗೆ ಚುನಾವಣೆ ಸ್ಪರ್ಧೆಯಿಂದ ನಿಷೇಧ ಹೇರುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ

ದ್ವೇಷ ಭಾಷಣ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆಯಲ್ಲಿ ಸ್ಪರ್ಧೆಯಿಂದ ನಿಷೇಧ ಹೇರುವಂತೆ…

43 mins ago

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವ್ಲಾಖಾಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಳೆದ ನಾಲ್ಕು ವರ್ಷಗಳಿಂದ…

1 hour ago