ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2021-22 ನೇ ಸಾಲಿಗೆ ಅರ್ಜಿ ಆಹ್ವಾನಿಸಿ ಅ.22 ಕ್ಕೆ ಅಂತಿಮ ದಿನವೆಂದು ನಿಗದಿಪಡಿಸಲಾಗಿದ್ದು, ಇದೀಗ ಅವಧಿ ವಿಸ್ತರಣೆ ಮನವಿ ಮೇರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
2021-22 ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರಗರ್ವ-1, 2ಎ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು www.bcwd.karnataka.gov.in ಅರ್ಜಿಯನ್ನು ನ.20 ರವರೆಗೆ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.