ಪಕ್ಷ ಹೇಳಿದ ಯಾವುದೇ ಕೆಲಸಕ್ಕೂ ಸಿದ್ಧ ; ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ‘ವರಿಷ್ಠರು ಬಯಸಿದರೆ ಸಚಿವ ಸ್ಥಾನ ತೊರೆದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.  ‘ಸಚಿವ ಸ್ಥಾನಕ್ಕಿಂತ ಪಕ್ಷ ಸಂಘಟನೆಯೇ ನನಗೆ ಹೆಚ್ಚು ಪ್ರಿಯ. ಬಿಜೆಪಿ ಶಿಸ್ತಿನ ಪಕ್ಷ. ವರಿಷ್ಠರು ಹೇಳಿದ ಹಾಗೆ ಎಲ್ಲರೂ ನಡೆದುಕೊಳ್ಳುವೆವು. ಸಚಿವ ಸ್ಥಾನ ಬಿಟ್ಟು ಪಕ್ಷದ ಸಂಘಟನೆಗೆ ಸೂಚಿಸಿದರೆ ಹೋಗಲೇಬೇಕು. ಪಕ್ಷ ಹೇಳಿದ ಯಾವುದೇ ಕೆಲಸಕ್ಕೂ ಸಿದ್ಧ’ ಎಂದರು.

‘ಬಿಜೆಪಿ ರಾಜ್ಯ ಘಟಕದ ಸ್ಥಾನ ಖಾಲಿ ಇಲ್ಲ. ನಳಿನ್ ಕುಮಾರ್ ಕಟೀಲ್ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರು ಅಧ್ಯಕ್ಷರಾದ ಮೇಲೆ ನಡೆದ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವು ಪಡೆದಿದೆ. ಹಾಗಾಗಿ, ಕಟೀಲ್ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸಚಿವ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಮುಂದಿನ ವಿಧಾನಸಭಾ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಸ್ಥಾನಗಳನ್ನು ಶೀಘ್ರ ಭರ್ತಿ ಮಾಡಬೇಕಿದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

Gayathri SG

Recent Posts

ನಟಿ ಶಿಲ್ಪಾಶೆಟ್ಟಿ ಹುಟ್ಟೂರು ಮಂಗಳೂರಿಗೆ ಭೇಟಿ : ಶಿಬರೂರು ಜಾತ್ರಾ ಮಹೋತ್ಸವದಲ್ಲಿ ಭಾಗಿ

ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ…

3 mins ago

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ

ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್…

6 mins ago

ಕುಂಪಲದಲ್ಲಿ ಇಬ್ಬರು ಮಕ್ಕಳ ತಂದೆ ನೇಣಿಗೆ ಶರಣು; ಪತ್ನಿಯೂ ಆತ್ಮಹತ್ಯೆಗೆ ಯತ್ನ

ಇಬ್ಬರು ಮಕ್ಕಳ ತಂದೆ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ಸಂಭವಿಸಿದೆ. ಘಟನೆ ಬೆನ್ನಲ್ಲೇ ಪತ್ನಿಯೂ ಆತ್ಮಹತ್ಯೆ…

17 mins ago

ಬಟ್ಟೆ ತೊಳೆಯುತ್ತಿದ್ದ ಹೆಂಡತಿಯನ್ನು ಕೊಚ್ಚಿ ಕೊಲೆ : ಗಂಡನ ಮೇಲೆ ಶಂಕೆ

ನಾಲೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಗಂಡೆ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಘಟನೆ…

18 mins ago

ನಾನೆಲ್ಲೂ ಓಡಿ ಹೋಗಿಲ್ಲ, ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ: ಎಚ್.ಡಿ. ರೇವಣ್ಣ

ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ…

23 mins ago

ಶೈಕ್ಷಣಿಕ ಸಾಧನೆಗಿಂತ ನನ್ನ ಮೀಸೆಯಿಂದಾಗಿ ಹೆಚ್ಚು ಟ್ರೋಲ್‌ ಆಗಿದ್ದೇನೆ : ಟಾಪರ್‌ ಹುಡುಗಿ

98.50 ಪ್ರತಿಶತ ಅಂಕದೊಂದಿಗೆ ಯುಪಿ ಬೋರ್ಡ್ 10ನೇ ತರಗತಿಯ ಟಾಪರ್ ಆಗಿ ಹೊರಹೊಮ್ಮಿರುವ ಪ್ರಾಚಿ ನಿಗಮ್ ತಮ್ಮ ಮುಖದ ಕೂದಲಿನ…

41 mins ago