News Karnataka Kannada
Friday, May 03 2024
ಶಿವಮೊಗ್ಗ

ಪಿಎಸ್‌ಐ ಅಕ್ರಮ: ರಾಜಕೀಯ ಲಾಭ ಪಡೆಯಲು ಪ್ರಿಯಾಂಕ್​ ಖರ್ಗೆ ಪ್ರಯತ್ನ- ಸುಧಾಕರ್

ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ನನ್ನ ವೇದನೆ ಕಡಿಮೆ ಮಾಡಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಡಾ. ಕೆ ಸುಧಾಕರ್ ಮನವಿ ಮಾಡಿದ್ದಾರೆ.
Photo Credit :

ಶಿವಮೊಗ್ಗ : ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಸತ್ಯ ಅರ್ಥ ಮಾಡಿಕೊಂಡು ಮಾತನಾಡಬೇಕು. ಪಿಎಸ್‌ಐ ಪರೀಕ್ಷಾ ಅಕ್ರಮದಲ್ಲಿ ರಾಜಕಾರಣದ ಲಾಭ ಮಾಡಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಮೂರನೇ ಸಿಎಂ ಅಧಿಕಾರಕ್ಕೆ ಬರುತ್ತಾರೆ ಎಂಬ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಪರೀಕ್ಷಾ ಅಕ್ರಮದ ಬಗ್ಗೆ ವ್ಯಾಪಕ ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಸರ್ಕಾರ ಇದಕ್ಕೆ ತಾರ್ಕಿಕ ಅಂತ್ಯ ನೀಡಲಿದೆ. ಈ ಹಂತದಲ್ಲಿ ಸರ್ಕಾರದಲ್ಲಿ ಇರುವವರು ಒಬ್ಬೊಬ್ಬರು ಒಂದೊಂದು ಮಾತನಾಡುವುದು ಸರಿಯಲ್ಲ ಎಂದರು.

ಬಿಜೆಪಿಯಿಂದ ಹಲವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸುಧಾಕರ್, ನಾವೂ ಅದನ್ನು ಹೇಳುವುದಿಲ್ಲ. ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು