ಶಿವಮೊಗ್ಗ: ಆಲ್ಕೋಳ ವೃತ್ತ ಸಮೀಪದ ಸಂಜೀವಿನಿ ಬಡಾವಣೆಯಲ್ಲಿ ಭಾನುವಾರ ಸ್ನೇಹಿತರೊಂದಿಗೆ ಪುಷ್ಕರಣಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ನಗರದ ನಂದಿನಿ ಬಡಾವಣೆಯ ಸಂದೇಶ್ (16) ಮೃತ ಬಾಲಕ. ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಪುಷ್ಕರಣಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ಈ ವೇಳೆ ಹೊಂಡದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ. ತಕ್ಷಣವೇ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಬಾಲಕನನ್ನು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ವಿನೋಬನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದರು. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.