ಸಾಗರ : ತಾಲೂಕಿನ ಕುಗ್ವೆ ಬಳಿಯ ತಿರುವಿನಲ್ಲಿ ಬಸ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಮೃತ ಯುವಕ ತಲವಾಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಡುವಾಣಿಯ ನಿವಾಸಿ ಅನಿಲ್ (22 ) ಎಂದು ಗುರುತಿಸಲಾಗಿದೆ. ಮಿನಿ ಬಸ್ಗೆ ಡಿಕ್ಕಿ ಹೊಡೆದು ಯುವಕ ತೀವ್ರವಾಗಿ ಗಾಯಗೊಂಡಿದ್ದು, ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ತಿಳಿದುಬಂದಿದೆ.
ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ