ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ 24 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಾಲೇಜು, ಹಾಸ್ಟೇಲ್ ಸೀಲ್ ಡೌನ್ ಮಾಡಲಾಗಿದೆ.ಈ ಕುರಿತಂತೆ ಮಾಹಿತಿ ನೀಡಿರುವಂತ ಭದ್ರಾವತಿಯ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ಅವರು, ಭದ್ರಾವತಿ ನಗರದ ನಿರ್ಮಲಾ ನರ್ಸಿಂಗ್ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಕಾರಣ, ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಾಲೇಜು, ಹಾಸ್ಟೆಲ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡುತ್ತಿರೋದಾಗಿ ಹೇಳಿದ್ದಾರೆ.