ಶಿವಮೊಗ್ಗ

ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಸೆಲ್ವಮಣಿ

ಶಿವಮೊಗ್ಗ: ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಪ್ರತಿಯೊಬ್ಬರಲ್ಲೂ ಎಚ್ಚರಿಕೆ ಇರುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ `ಘನತೆಯ ಬದುಕು’ ಮಾಧ್ಯಮ ಮತ್ತು ಮಕ್ಕಳು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಮಾಧ್ಯಮಗಳು ತರಾತರಿಯ ಧಾವಂತದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಮಕ್ಕಳ ಹಕ್ಕುಗಳ ಕುರಿತಾದ ಕಾಯ್ದೆಗಳು ಅತ್ಯಂತ ಕಠಿಣವಾಗಿದ್ದು, ಇದರ ಸೂಕ್ಷö್ಮತೆಯನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಾಗಿದೆ. ವರದಿ ಮಾಡುವಾಗ ಮಕ್ಕಳ ಹಕ್ಕುಗಳ ಬಗ್ಗೆ ಅತ್ಯಂತ ಸಂವೇದನಾಶೀಲತೆಯನ್ನು ಹೊಂದಿರುವುದು ಅಗತ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಸರಸ್ವತಿ ಅವರು ಜೆಜೆ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿ, ಮಕ್ಕಳ ಖಾಸಗಿತನ ಮತ್ತು ಹಕ್ಕುಗಳನ್ನು ಉಲ್ಲಂಘಿಸಲು ಯಾರಿಗೂ ಸಾಧ್ಯವಿಲ್ಲ. ಕಾಯ್ದೆ ಅತ್ಯಂತ ಬಿಗಿಯಾಗಿದ್ದು, ಮಕ್ಕಳ ವಿಷಯದಲ್ಲಿ ವ್ಯವಹರಿಸುವಾಗ ಅತೀವ ಜಾಗ್ರತೆ ಅಗತ್ಯವಿದೆ. ಮಾಧ್ಯಮಗಳು ಯಾವುದೇ ಕಾರಣಕ್ಕೂ ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗದಂತೆ ಎಚ್ಚರಿಕೆ ವಹಿಸಬೇಕು. ಮಕ್ಕಳ ಹಕ್ಕುಗಳು ಮತ್ತು ಮಾಧ್ಯಮ ಕುರಿತಾಗಿ ಸುಪ್ರೀಂಕೋರ್ಟ್ ಸಹ ಕೆಲವು ತೀರ್ಪುಗಳಲ್ಲಿ ತನ್ನ ನಿಲುವನ್ನು ಸ್ಪಷ್ಪಪಡಿಸಿದ್ದು, ವಿಷಯದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ.ರೇಖಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗುವ ಯಾವುದೇ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ರಕ್ಷಣಾ ಸಮಿತಿಗೆ ದೂರು ನೀಡಬಹುದಾಗಿದೆ. 1098 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದರೂ ಸಮಿತಿ ತಕ್ಷಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಸಮಿತಿಯ ಸದಸ್ಯೆ ಪ್ರತಿಭಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಾಧ್ಯಮಗಳು ವರದಿಯನ್ನು ಮಾಡುವಾಗ ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗದಂತೆ ಯಾವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಇತ್ಯಾದಿ ಅಮೂಲ್ಯ ಮಾಹಿತಿಗಳು ಈ ಕೈಪಿಡಿಯಲ್ಲಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ, ಸಮಿತಿ ಸದಸ್ಯರಾದ ಶೀಲಾ ಸುರೇಶ್, ರೇಣುಕಮ್ಮ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Swathi MG

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

9 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

32 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

51 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago