ಶಿವಮೊಗ್ಗ

ಮಹಿಳಾ ಹಾಕಿ ತಂಡದ ಸಹಾಯಕ ಕೋಚ್‍ಗೆ ಅಭಿನಂದನೆ

ಶಿವಮೊಗ್ಗ : ಇತ್ತೀಚೆಗೆ ಮುಕ್ತಾಯಗೊಂಡ ಒಲಂಪಿಕ್ಸ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಶಿವಮೊಗ್ಗ ಮೂಲದ ಅಂಕಿತಾ ಬಿ.ಎಸ್ ಅವರನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೋಮವಾರ ಅಭಿನಂದಿಸಿದರು.

ಒಲಂಪಿಕ್ಸ್‍ನಲ್ಲಿ ಸೆಮಿ ಫೈನಲ್ ತಲುಪಿದ್ದ ಭಾರತೀಯ ಹಾಕಿ ತಂಡದ ಸದಸ್ಯರಾಗಿದ್ದ ತಾವು ಶಿವಮೊಗ್ಗ ಮೂಲದವರು ಎಂಬುವುದು ಜಿಲ್ಲೆಯ ಹೆಮ್ಮೆ. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಕಿತಾ ಬಿ.ಎಸ್. ` ನಾನು ಶಿವಮೊಗ್ಗದವಳು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಅನ್ನಿಸುತ್ತಿದೆ. ಒಲಂಪಿಕ್ಸ್‍ನಲ್ಲಿ ಸಾಧನೆ ಮಾಡಿದ ತಂಡದ ಭಾಗವಾಗಿದ್ದು ಅವಿಸ್ಮರಣೀಯ ಅನುಭವ. ಶಿವಮೊಗ್ಗದಲ್ಲಿ ಪ್ರತಿಭಾವಂತ ಹಾಕಿ ಆಟಗಾರರು ಇದ್ದಾರೆ. ಕೆಲವರು ರಾಷ್ಟ್ರೀಯ ಮಟ್ಟದಲ್ಲೂ ಪ್ರತಿನಿಧಿಸುತ್ತಿದ್ದಾರೆ. ಇನ್ನಷ್ಟು ಪ್ರತಿಭೆಗಳನ್ನು ಗುರುತಿಸಿ ತರಬೇತಿ ನೀಡುವ ಗುರಿ ಇದೆ. ಶಿವಮೊಗ್ಗದಲ್ಲಿ ಉತ್ತಮ ಹಾಕಿ ಮೈದಾನ ಸೌಲಭ್ಯ ಕಲ್ಪಿಸಿದರೆ ಉತ್ತಮ ಆಟಗಾರರನ್ನು ಹೊರ ತರಲು ಸಾಧ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಅಂಕಿತಾ ಅವರ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

44 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

1 hour ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago