News Karnataka Kannada
Monday, May 06 2024
ಶಿವಮೊಗ್ಗ

ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ

Photo Credit : IANS

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ಮಹಿಳೆಯನ್ನು ಥಳಿಸಿ ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರ ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ಸೋಮವಾರ ರಾತ್ರಿ ಗಂಡನೊಂದಿಗೆ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ.

ಹುಷಾರಿಲ್ಲದ ಕಾರಣ ಪತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಮಹಿಳೆ ವಾಪಸ್ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸಂಪತ್, ಆದರ್ಶ್ ಹಾಗೂ ಇಬ್ಬರು ಯುವಕರು ಬೈಕ್ ನಲ್ಲಿ ಬಂದು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ.

ಪತಿಯನ್ನು ಥಳಿಸಿ ಮಹಿಳೆಯನ್ನು ಸಮೀಪದ ಕಾಡಿನೊಳಗೆ ಎಳೆದುಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಹಾಗೂ ಆಕೆಯ ಪತಿ ಕೂಗಾಡಿದ್ದಾರೆ. ಕೂಗಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಆದರ್ಶ್ ಮತ್ತು ಸಂಪತ್ ಅವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು