ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ: 144 ಸೆಕ್ಷನ್ ಜಾರಿ

ಶಿವಮೊಗ್ಗ,ಫೆ.21 : ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನ ಭೀಕರ ಕೊಲೆಯಿಂದ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಮೊದಲೇ ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನನ್ನು ಕಳೆದ ರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

ಈ ಘಟನೆಯಿಂದ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಷಲಾಗಿದ್ದು, ಪರಿಸ್ಥಿತಿ ಮೀರದಂತೆ ಎಲ್ಲ ಕಡೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಶಿವಮೊಗ್ಗದವರೇ ಆದ ಗೃಹ ಸಚಿವ ಅರಗ ಜ್ಞಾನೇಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಕೆಲ ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ದುರ್ಲಾಭ ಪಡೆಯಬಹುದೆಂಬ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್‍ಪಿ ಲಕ್ಷ್ಮಿಪ್ರಸಾದ್ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಯಾವುದೇ ಆಹಿತಕರ ಘಟನೆ ನಡೆಯದಂತೆ ಬೇರೆ ಜಿಲ್ಲೆಗಳಿಂದಲೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಿಸಿಕೊಳ್ಳಲಾಗಿದೆ.

ಮತ್ತೊಂದೆಡೆ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಐಜಿಪಿ, ಕೆಎಸ್‍ಆರ್‍ಪಿ, ರ್ಯಾಪಿಡ್ ಆಯಕ್ಷನ್ ಫೋರ್ಸ್ ಸೇರಿದಂತೆ ವಿವಿಧ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.ಈಗಲೂ ಕೂಡ ಶಿವಮೊಗ್ಗ ನಗರ ಬೂದಿಮುಚ್ಚಿದ ಕೆಂಡದಂತಿದ್ದು, ಯಾವುದೇ ಸಂದರ್ಭದಲ್ಲಿ ಕೋಮುಸಂಘರ್ಷ ನಡೆಯಬಹುದೆಂಬ ಆತಂಕ ನಿರ್ಮಾಣವಾಗಿದೆ. ಸೀಗೆಹಟ್ಟಿಯಲ್ಲಿ ಮನೆ ಮುಂದೆ ನಿಂತಿದ್ದ ಮೂರು ಬೈಕ್ ಹಾಗೂ ಒಂದು ಟಾಟಾ ಏಸ್‍ಗೆ ಬೆಂಕಿ ಹಚ್ಚಲಾಗಿದೆ. ಇದರಲ್ಲಿ ಬೈಕ್‍ಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನೀಡಿ ಬೆಂಕಿ ನಂದಿಸಿದರು. ಸೀಗೆಹಟ್ಟಿಯಲ್ಲಿ ಕಲ್ಲು ತೂರಾಟ ನಡೆದಿದ್ದು, ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ರಾತ್ರಿ ವಾಹನಗಳಿಗೆ ಬೆಂಕಿ ಕೊಲೆ ಪ್ರಕರಣದ ಬೆನ್ನಲ್ಲೇ ನಗರಕ್ಕೆ ಐಜಿಪಿ ತ್ಯಾಗರಾಜನ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದು, ಗಸ್ತು ನಡೆಸಿ, ಮೊಕ್ಕಂ ಹೂಡಿದ್ದಾರೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಷೋಷಣೆ ಮಾಡಲಾಗಿದೆ ಎಂದು ಡಿಡಿಪಿಐ ರಮೇಶ್ ತಿಳಿಸಿದ್ದಾರೆ.

ಯುವಕರ ಗುಂಪೊಂದು ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಹರ್ಷ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಹತ್ಯೆ ವಿಚಾರ ತಿಳಿಯುತ್ತಿದ್ದ ಹಾಗೆ ಶಿವಮೊಗ್ಗ ನಗರದಲ್ಲಿ ಚಿತ್ರಣ ದಿಢೀರ್ ಬದಲಾಗಿದೆ.

ತಕ್ಷಣ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಗರದಾದ್ಯಂತ ಅಂಗಡಿ, ಹೊಟೇಲ್‍ಗಳನ್ನು ಬಂದ್ ಮಾಡಿಸಿದ್ದಾರೆ. ಫೆ.23ರ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಯಲ್ಲಿ ಜನರು ಗುಂಪುಗೂಡಲು ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಸಲಾಗಿದೆ. ಮೆರವಣಿಗೆ, ಪ್ರತಿಭಟನೆ ಸೇರಿದಂತೆ ಎಲ್ಲಾ ಬಗೆಯ ಸಭೆ, ಸಮಾರಂಭಗಳನ್ನು ನಿಷೇಧ ಮಾಡಲಾಗಿದೆ. ಶಸ್ತ್ರಗಳು, ದೊಣ್ಣೆ, ಕತ್ತಿ ಸೇರಿದಂತೆ ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಒಯ್ಯುವುದು, ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಒಯ್ಯುವಂತಿಲ್ಲ.

ನಿಷೇಧಾಜ್ಞೆ ಜಾರಿಯಲ್ಲಿ ಇರುವ ಅವಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ದ್ವಿಚಕ್ರ ವಾಹನ ಸಂಚಾರ ನಿಷೇಸಲಾಗಿದೆ. ತುರ್ತು ಸಂದರ್ಭ ದ್ವಿಚಕ್ರ ವಾಹನಗಳ ಸಂಚಾರ ಮಾಡುವವರು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ಪಾಸ್ ಪಡೆಯಬೇಕು. ಎಲ್ಲಾ ಅಂಗಡಿಗಳ ಬಾಗಿಲು ಮತ್ತು ಚಿತ್ರಮಂದಿರ ಪ್ರದರ್ಶನವನ್ನು ರಾತ್ರಿ 9 ಗಂಟೆಯೊಳಗೆ ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಜರಂಗದಳದ ಕಾರ್ಯಕರ್ತ ಹರ್ಷಭಜರಂಗದಳದ ಕಾರ್ಯಕರ್ತ ಹರ್ಷಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾವಿರಾರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.

Gayathri SG

Recent Posts

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

10 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

22 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

46 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

1 hour ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

1 hour ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

2 hours ago