ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ; ತನಿಖೆಗೆ ಒತ್ತಾಯಿಸಿದ ಶಾಸಕ ಕೆ.ಬಿ.ಪ್ರಸನ್ನಕುಮಾರ್

ಶಿವಮೊಗ್ಗ :  ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದ್ದು, ಸಿಮ್ಸ್ ನಿರ್ದೇಶಕರ ನೇಮಕಾತಿ, ಅಧ್ಯಾಪಕರ ಹಾಗೂ ಪ್ರಾಂಶುಪಾಲರ ಹುದ್ದೆ ಸಂದರ್ಶನದಲ್ಲಿ ವ್ಯಾಪಕ ಅವ್ಯವಹಾರ ನಡೆದಿದ್ದು ಸರ್ಕಾರ ಸಮಗ್ರ ತನಿಖೆಗೆ ಒಳಪಡಿಸಬೇಕೆಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ತಿಂಗಳಲ್ಲಿ ೧೭ ಜನ ಸಹಾಯಕ ಪ್ರಾಧ್ಯಾಪಕರು ಹಾಗೂ ೮ ವೈದ್ಯರ ನೇಮಕಾತಿಗೆ ಸಂಬಂಧಪಟ್ಟಂತೆ ಸಂದರ್ಶನ ನಡೆಸಲಾಗಿದ್ದು ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಅಪಾದಿಸಿದರು. ಕೋವಿಡ್ ೨ನೇ ಅಲೆ ಸಂದರ್ಭದಲ್ಲಿ ಮೆಗ್ಗಾನ್‌ನಲ್ಲಿ ಸುಮಾರು ೪,೫೦೦ ಕೋವಿಡ್ ರೋಗಿಗಳು ದಾಖಲಾಗಿದ್ದು ಇದರಲ್ಲಿ ಸುಮಾರು ೧,೪೦೦ ಜನರು ಮೃತಪಟ್ಟಿದ್ದಾರೆಂದು ಅವರೇ ಅಂಕಿಅಂಶಗಳನ್ನು ನೀಡುತ್ತಾರೆ. ಈ ಸಂಖ್ಯೆ ದುಪ್ಪಟ್ಟಾಗಿರುವ ಸಾಧ್ಯತೆಯಿದೆ.

ಮೆಗ್ಗಾನ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಹಲವು ವೈದ್ಯರು ಕೇವಲ ಹಾಜರಿ ಹಾಕಿ ಖಾಸಗಿ ಕ್ಲಿನಿಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಕರ್ತವ್ಯದಲ್ಲಿ ಅಸಡ್ಡೆ ತೋರಿದ ಪರಿಣಾಮ ಸಾವಿನ ಪ್ರಮಾಣ ಹೆಚ್ಚಾಗಿದೆ ಎಂದು ಆರೋಪಿಸಿದರು. ೩ನೇ ಸಂದರ್ಭದಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ವಿಶೇಷ ಆಸಕ್ತಿಯಿಂದ ನಿರ್ಮಾಣವಾದ ಮೆಗ್ಗಾನ್ ಆಸ್ಪತ್ರೆ ಹಿಂದಿನಿಂದಲೂ ಉತ್ತಮ ಸೇವೆಗೆ ಹೆಸರುವಾಸಿ. ಆದರೆ ಇತ್ತೀಚಿನ ಕೆಲ ಬೆಳವಣಿಗೆಗಳು ಆಸ್ಪತ್ರೆಗೆ ಕೆಟ್ಟಹೆಸರು ತರುತ್ತಿದ್ದು ಇದಕ್ಕೆ ಸಿಮ್ಸ್ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೇ ನೇರ ಹೊಣೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಶ್ಯಾಮ್‌ಸುಂದರ್, ಮಂಜುನಾಥ್, ರಘು, ಸುವರ್ಣ ನಾಗರಾಜ್, ಅಕ್ರಮ್ ಮತ್ತಿತರರು ಇದ್ದರು.

Gayathri SG

Recent Posts

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

8 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

13 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

28 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

34 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

45 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

55 mins ago