ಶಿವಮೊಗ್ಗ : ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ 29 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಆತಂದಕ ಹೊತ್ತಲ್ಲೇ ಶಿವಮೊಗ್ಗದಲ್ಲಿ 29 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ವಸತಿ ನಿಲಯದಲ್ಲಿದ್ದ 384 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಕೇರಳದ 23 ವಿದ್ಯಾರ್ಥಿಗಳು ಸೇರಿ ಒಟ್ಟು 29 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿ 800 ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಸ್ಪತ್ರೆ ಸಿಬ್ಬಂದಿಯಲ್ಲಿ 9 ಮಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯ ಒಪಿಡಿ, ನರ್ಸಿಂಗ್ ಕಾಲೇಜು, ಹಾಸ್ಟೆಲ್ ಬಂದ್ ಮಾಡಲಾಗಿದೆ.