ಶಿವಮೊಗ್ಗ: ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿ ಹಿನ್ನಲೆಯಲ್ಲಿ, ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನವೆಂಬರ್ 07 ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ 110/11 ಕೆವಿ ಆರ್ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-3 ಫೀಡರ್ಗೆ ಸಂಬಂಧಿಸಿದದಂತೆ ಹಾಳಾದ ಕಂಬಗಳನ್ನು ಬದಲಾಯಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ವಿದ್ಯಾನಗರ, ಕಂಟ್ರಿಕ್ಲಬ್ ರಸ್ತೆ, ಚಿಕ್ಕಲ್, ಸಿದ್ದೇಶ್ವರ ನಗರ, ಗುರುಪುರ, ವೆಂಕಟೇಶ ನಗರ, ಪುರಲೆ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ತಿಳಿಸಿದೆ.