ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 27 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.
ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.