ಶಿವಮೊಗ್ಗ : ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಗ್ರಾಂಥಾಲಗಳನ್ನು ಮುಚ್ಚಲಾಗುತ್ತಿತ್ತು, ಈ ಸೇವೆ ಓದುಗರಿಗಾಗಿ ಲಭ್ಯವಾಗೋದಿಲ್ಲ.
ಈ ಕುರಿತಂತೆ ಶಿವಮೊಗ್ಗ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಕೊರೋನಾ ಕಾರಣದಿಂದಾಗಿ ನಿಯಂತ್ರಣ ಕ್ರಮವಾಗಿ ರಾಜ್ಯ ಸರ್ಕಾರ ದಿನಾಂಕ 5-1-2022ರಿಂದ 19-01-2022ರಂದು ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ.
ಈ ಹಿನ್ನಲೆಯಲ್ಲಿ ಶನಿವಾರ ಹಾಗೂ ಭಾನುವಾರ ಗ್ರಂಥಾಲಯಗಳ ಸೇವೆಯನ್ನು ಸ್ಥಗಿತಗೊಳಿಸಿ, ಮುಂದಿನ ಆದೇಶದವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಸಾರ್ವಜನಿಕ ಗ್ರಂಥಾಲಯ ಸೇವೆಯನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.