News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿಗೆ ಕೊರೋನಾ ದೃಢ

ರಾಜ್ಯದಲ್ಲಿ ಈವರೆಗೆ 199 ಜನರಲ್ಲಿ ಜೆಎನ್.1 ದೃಢ ಪಟ್ಟಿದೆ. ಜಿನೋಮಿಕ್ ಸ್ವೀಕೆನ್ಸ್ ವರದಿಯಲ್ಲಿ 199 ಮಂದಿಗೆ ಜೆಎನ್.1 ಸೋಂಕು ತಗುಲಿರೋದು ದೃಢಪಟ್ಟಿದೆ. ಈವರೆಗೆ ಜಿನೋಮ್‌ ಸೀಕ್ವೆನ್ಸ್‌ ಟೆಸ್ಟ್‌ಗೆ 601 ಸ್ಯಾಂಪಲ್ಸ್‌ಗಳ‌ ರವಾನಿಸಲಾಗಿತ್ತು. ಡಿಸೆಂಬರ್ 25ರಂದು ಹೊರ ಬಿದ್ದ ಮೊದಲ ರಿಪೋರ್ಟ್ ನಲ್ಲಿ 60 ಸ್ಯಾಂಪಲ್ ಗಳ ಪೈಕಿ 34 ಮಂದಿಗೆ ಜೆಎನ್ 1 ತಗುಲಿರೋದು ಪತ್ತೆಯಾಗಿದೆ.
Photo Credit :

ಶಿವಮೊಗ್ಗ : ನಿನ್ನೆ ಸೊರಬ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಇಂದು ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಒಳಪಡಿಸಿದಂತ ಸಂದರ್ಭದಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಕೊರೋನಾ ದೃಢಪಟ್ಟಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ತಾಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೀಲ್ ಅವರು, ನಿನ್ನೆ ಸೊರಬ ತಾಂತ್ರಿಕ ವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಇಂದು ವೈದ್ಯರು ಮತ್ತು ಸಿಬ್ಬಂದಿಯ ತಂಡ ರಚಿಸಿ ಕಾಲೇಜಿನ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಇಂದಿನ ಪ್ರೇಮರಿ ಕಾಂಟ್ಯಾಕ್ಟ್ಸ್ ಹಾಗೂ ರೋಗ ಲಕ್ಷಣಗಳು ಕಂಡು ಬಂದವರಿಗೆ ಕೋವಿಡ್ ಪರೀಕ್ಷೆಯಲ್ಲಿ ಓರ್ವ ವಿದ್ಯಾರ್ಥಿನಿ ಪಾಸಿಟಿವ್ ಎಂದು ದೃಢಪಟ್ಟಿದೆ. TRIAGE ಕೇಂದ್ರದಲ್ಲಿ ತಪಾಸಣೆ ಮಾಡಲಾಯಿತು. ಹೋಂ ಐಸೋಲೇಷನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು