ಶಿವಮೊಗ್ಗ

ಶಿವಮೊಗ್ಗ: ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಪ್ರಕಟಿಸಿದ ಸಿಎಂ

ಶಿವಮೊಗ್ಗ: ಕೊಲೆಯಾದ ಹಿಂದೂ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರದಿಂದ ಬಸವರಾಜ ಬೊಮ್ಮಾಯಿ ಅವರು 25 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಮಾ. 6 ರಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಪರಿಹಾರದ ಚೆಕ್ ವಿತರಿಸಲಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಕೆಲವು ಮುಸಲ್ಮಾನ್ ಗೂಂಡಾಗಳು ಈ ಹತ್ಯೆ ಮಾಡಿದ್ದಾರೆ ಎಂದು ಪುನರುಚ್ಛರಿಸಿದ ಅವರು, ಎಲ್ಲಾ ಮುಸ್ಲಿಮರು ಕೆಟ್ಟವರಲ್ಲ, ಆದರೆ, ಹತ್ಯೆ ಮಾಡುವ ಗೂಂಡಾಗಳು ಮುಸ್ಲಿಮರಲ್ಲಿ ಇದ್ದಾರೆ. ಈ ಹತ್ಯೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು. ಮುಸ್ಲಿಂ ಮುಖಂಡರು ಕೂಡ ಇಂತಹ ಘಟನೆಗಳಾದಾಗ ಎಚ್ಚರಿಕೆಯಿಂದಿರಬೇಕು ಎಂದರು.

ಕಾಂಗ್ರೆಸ್ ನಾಯಕರು ಮತ್ತು ಕೆಲವು ಮುಸ್ಲಿಂ ಮುಖಂಡರು ಕೆಲವು ವರ್ಷಗಳ ಹಿಂದೆ ಹತ್ಯೆಯಾದ ವಿಶ್ವನಾಥ್ ಶೆಟ್ಟಿ ಅವರ ಮನೆಗೆ ಹೋಗಿ ಸಾಂತ್ವನ ಹೇಳುತ್ತಿದ್ದಾರೆ. ನಮಗೂ ಕೂಡ ಅವರ ತಾಯಿ ಚಿಂದಿ ಆಯುತ್ತಿರುವ ವಿಷಯ ಮಾಧ್ಯಮಗಳಲ್ಲಿ ಬಂದ ವರದಿ ನೋಡಿ ಗೊತ್ತಾಗಿದೆ. ಆದರೆ, ಬಿಜೆಪಿ ವಿಶ್ವನಾಥ್ ಹತ್ಯೆಯಾದಾಗ ಸುಮಾರು 18 ಲಕ್ಷ ರೂ. ನೀಡಿತ್ತು ಎಂದ ಅವರು ಈಗ ಕೆಲವರು ಇದನ್ನು ರಾಜಕೀಯಗೊಳಿಸಲು ಸಾಂತ್ವನ ಹೇಳುವ ನೆಪ ಮಾಡುತ್ತಿದ್ದಾರೆ ಎಂದು ದೂರಿದರು.

ಬಿಜೆಪಿ ಟಿಕೆಟ್ ಹಂಚಿಕೆ ಮಾಡಲು ಬಿ.ಕೆ. ಹರಿಪ್ರಸಾದ್ ಯಾರು ಎಂದು ಪ್ರಶ್ನಿಸಿದ ಅವರು, ಅವರು ಹಿಂಬಾಗಿಲ ರಾಜಕಿಯ ಬಿಟ್ಟು ಯಸವುದಾದರೂ ತಾಪಂ ಕ್ಷೇತ್ರದಲ್ಲಿ ಟಿಕೆಟ್ ಪಡೆದು ಗೆದ್ದು ಬರಲಿ. ಆ ಬಳಿಕ ನನ್ನ ಬಗ್ಗೆ ಮಾತನಾಡಲಿ ಎಂದು ಸವಾಲು ಹಾಕಿದರು.

Sneha Gowda

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

1 min ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

8 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

15 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

27 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

32 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

47 mins ago