ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ 16 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 19 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ 08, ಭದ್ರಾವತಿ 00, ತೀರ್ಥಹಳ್ಳಿ 01, ಶಿಕಾರಿಪುರ 00, ಸಾಗರ 05, ಹೊಸನಗರ 01, ಸೊರಬ 00 ಹಾಗೂ ಹೊರ ಜಿಲ್ಲೆಯ 01 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 158 ಸಕ್ರಿಯ ಪ್ರಕರಣಗಳಿವೆ.
3222 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 45 ಜನ, ಖಾಸಗಿ ಆಸ್ಪತ್ರೆಯಲ್ಲಿ 05 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 07 ಜನರಿದ್ದು, ಡಿಸಿಎಚ್ ಸಿಯಲ್ಲಿ 04 ಜನ ಹಾಗೂ 97 ಸೋಂಕಿತರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ