ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 422 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 345 ಜನರು ಗುಣಮುಖರಾಗಿದ್ದಾರೆ.ಸೋಂಕಿತರ ಪೈಕಿ ಶಿವಮೊಗ್ಗ ತಾಲ್ಲೂಕಿನ 125 ಮಂದಿಗೆ ಸೋಂಕು ದೃಢಪಟ್ಟಿದ್ದು, ಭದ್ರಾವತಿಯ 157, ತೀರ್ಥಹಳ್ಳಿಯ 8, ಶಿಕಾರಿಪುರದ 19, ಸಾಗರದ 29, ಹೊಸನಗರದ 47, ಸೊರಬದ 30 ಹಾಗೂ ಹೊರ ಜಿಲ್ಲೆಯಿಂದ ಬಂದ 7 ಮಂದಿಗೆ ಸೋಂಕು ತಗುಲಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1688ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 34 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 25 ಸೋಂಕಿತರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸಿಎಚ್ಸಿಯಲ್ಲಿ 22, ಹೋಮ್ ಐಸೊಲೇಷನ್ನಲ್ಲಿ 1594, ಟ್ರಯೇಜ್ನಲ್ಲಿ 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.