ಸಂತೋಷ್ ಪ್ರಕರಣ: ಈಶ್ವರಪ್ಪ ಅವರನ್ನು ಬಲಿಪಶು ಮಾಡಲಾಗುತ್ತಿದೆ- ಆರಗ ಜ್ಞಾನೇಂದ್ರ

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಎಸ್ ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರವೇ ತಪ್ಪಿತಸ್ಥರನ್ನು ಪೊಲೀಸರು ಪತ್ತೆ ಮಾಡಲಿದ್ದಾರೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ‌ ನೀಡಿದ್ದಾರೆ. ಇದರಲ್ಲಿ ಪಕ್ಷದ ವರಿಷ್ಟರ ಒತ್ತಡವಿಲ್ಲ. ಪಾರದರ್ಶಕ ತನಿಖೆಗಾಗಿ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ ಎಂದರು.

ಸಂತೋಷ್ ಕುಟುಂಬದವರ ಸಮ್ಮುಖದಲ್ಲೇ ಲಾಡ್ಜ್ ಕೊಠಡಿ ಬಾಗಿಲು ತೆರೆಯಲಾಗಿದೆ. ಮರಣೋತ್ತರ ಪರೀಕ್ಷೆಯನ್ನೂ ಮಾಡಲಾಗಿದೆ. ವಾಟ್ಸಪ್ ಡೆತ್ ನೋಟ್ ಈ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.

ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಈಶ್ವರಪ್ಪ ಅವರನ್ನು ಬಲಿಪಶು ಮಾಡಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್‌ ನಾಯಕರ ಕೈವಾಡ ಆರೋಪ ಸೇರಿದಂತೆ ಎಲ್ಲ ಸಂಗತಿ ತನಿಖೆಯಿಂದ ಬಯಲು ಮಾಡುತ್ತೇವೆ. ಈಶ್ವರಪ್ಪ ಆರೋಪ ಮುಕ್ತರಾಗಿ ಬರುತ್ತಾರೆ ಎಂದರು.

Gayathri SG

Recent Posts

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

5 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

26 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

47 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

54 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 hour ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

1 hour ago