News Karnataka Kannada
Friday, May 03 2024
ಶಿವಮೊಗ್ಗ

ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸಲು ಪೊಲೀಸರಿಗೆ ನ್ಯಾಯಾಲಯ ಸೂಚನೆ

Ishwarppa
Photo Credit : News Kannada

ಶಿವಮೊಗ್ಗ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದಲ್ಲದೇ, ಜಿಲ್ಲೆಯಲ್ಲಿ ಗಲಾಟೆ ನಡೆಯಲು ಕಾರಣರಾಗಿದ್ದರು ಎಂದು ಆರೋಪಿಸಿ ಪೀಸ್ ಸಂಘಟನೆ ಕಾರ್ಯಕರ್ತ ರಿಯಾಜ್ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು.

ಸಚಿವರ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಿಯಾಜ್ ಕೋರ್ಟ್ ಮೊರೆ ಹೋಗಿದ್ದರು.

ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು