News Karnataka Kannada
Sunday, May 05 2024
ಶಿವಮೊಗ್ಗ

ಹರ್ಷನ ಹತ್ಯೆ ಪ್ರಕರಣ: ತನಿಖೆ ಜವಾಬ್ದಾರಿಯನ್ನು ಎನ್ಐಎಗೆ ವಹಿಸಿದ ಸರ್ಕಾರ

K'taka district tense after miscreants threaten slain Bajrang Dal activist's family
Photo Credit :

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಎನ್​ಐಎಗೆ ವಹಿಸಲಾಗಿದೆ. ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿತ್ತು. ಹೀಗಾಗಿ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ಸರ್ಕಾರ ವಹಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಈಗಾಗಲೇ ಎಫ್​ಐಆರ್ ದಾಖಲಿಸಿಕೊಂಡಿದೆ ಎನ್ನಲಾಗುತ್ತಿದೆ. ಹರ್ಷನ ಹತ್ಯೆ ಪ್ರಕರಣದ ಹಿಂದೆ ಕೆಲ ಸಂಘಟನೆಗಳು ಇರುವ ಅನುಮಾನ ಇದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಹಲವು ಸಂಘ-ಸಂಸ್ಥೆಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಕೇಂದ್ರ‌ದ ಗೃಹ ಸಚಿವ ಅಮಿತ್ ಷಾ ಅವರಿಗೂ ಪತ್ರ ಬರೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಹರ್ಷನ ಹತ್ಯೆ ಪ್ರಕರಣವನ್ನು ಎನ್​ಐಎಗೆ ವಹಿಸುವಂತೆ ಕೋರಿದ್ದರು.

ಶೋಭಾ ಕರಂದ್ಲಾಜೆ ಅವರ ಪತ್ರಕ್ಕೆ ಅಮಿತ್ ಷಾ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಜತೆಗೆ ಹಿಂದು ಮುಖಂಡ ಗಿರೀಶ್ ಭಾರದ್ವಾಜ್ ಎಂಬುವರು ಕೂಡ ಎನ್​ಐಎ ಡೈರೆಕ್ಟರ್ ಜನರಲ್​ಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು ಎನ್​ಐಎ ನಿಂದಲೇ ನಡೆಸುವಂತೆ ಕೋರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು