News Karnataka Kannada
Sunday, April 28 2024
ಶಿವಮೊಗ್ಗ

ಹರ್ಷ ಹತ್ಯೆ ಪ್ರಕರಣ: ಆರೋಪಿಗಳು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

K'taka district tense after miscreants threaten slain Bajrang Dal activist's family
Photo Credit :

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆವಹಿಸಿ ಶಿವಮೊಗ್ಗ 2ನೇ ಜೆ ಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಹರ್ಷ ಹತ್ಯೆ ಪ್ರಕರಣ ತನಿಖೆಗೆ ರಚನೆಗೊಂಡಿದ್ದ ವಿಶೇಷ ಪೊಲೀಸ್ ತಂಡ ನಿನ್ನೆ ಅಬ್ದುಲ್ ರೋಷನ್ ಹಾಗೂ ಜಾಫರ್ ಸಾಧಿಕ್ ಅಲಿಯಾಸ್ ಬದ್ರುದ್ದೀನ್ ಎಂಬ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿತ್ತು.ಈ ಮೂಲಕ ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 2 ಕಾರು, 1 ದ್ವಿಚಕ್ರವಾಹನ ವಶಕ್ಕೆ ಪಡೆಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತ ಎಲ್ಲಾ 10 ಆರೋಪಿಗಳನ್ನು ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ಮೆಗ್ಗಾನ್ ಆಸ್ಪತ್ರೆಗೆ ಮೆಡಿಕಲ್ ಟೆಸ್ಟ್ ಗೆ ಕರೆದೊಯ್ದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು