ಹಿಂದೂ ಸಮಾಜ ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ

ಶಿವಮೊಗ್ಗ: 1925 ರಲ್ಲಿ ಆರ್ ಎಸ್‌ಎಸ್ ಸ್ಥಾಪನೆಯಾಗಿಲ್ಲ ಎಂದಿದ್ದರೆ ದೇಶ ಯಾವ ಸ್ಥಿತಿಯಲ್ಲಿ ಇರುತ್ತಿತ್ತು? ಕೆಲವು ಮುಸಲ್ಮಾನರು ದಂಗೆ ಎಬ್ಬಿಸುವ ಕೆಲಸ ಮಾಡುತ್ತಿದ್ದರು. ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಹೆಡ್ಗೇವಾರ್ ಆರ್ ಎಸ್‌ಎಸ್ ಸ್ಥಾಪನೆ ಮಾಡದಿದ್ದರೇ ಹಿಂದೂಗಳು ಬಲಹೀನ ಸ್ಥಿತಿಯಲ್ಲಿ ಇರಬೇಕಿತ್ತು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕ ವಿಚಾರವಾಗಿ ವಿಪಕ್ಷಗಳು ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್, ನಾರಾಯಣ ಗುರು ಹೆಸರು ತೆಗೆದರು ಎಂದು ಹೇಳಿದರು ಆದರೆ ಇವರು ನೋಡಿದ್ದಾರಾ‌? ಸುಮ್ ಸುಮ್ನೆ ಗೊಂದಲ ಹುಟ್ಟುಹಾಕುತ್ತಾರೆ ಎಂದರು.

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸುಳ್ಳು ಹೇಳುವುದಕ್ಕೆ ಅರ್ಥವೇ ಇಲ್ಲ. ಯಾವ ಕಾರಣಕ್ಕೂ ಕೂಡ ನಾರಾಯಣ ಗುರು ಮತ್ತು ಹಾಗೆಯೇ ಭಗತ್ ಸಿಂಗ್ ಹೆಸರು ಕೂಡ ತೆಗೆಯಲ್ಲ. ಡಾ. ಹೆಡ್ಗೇವಾರ್ ಅವರ ರಾಷ್ಟ್ರಭಕ್ತಿ ವಿಚಾರವನ್ನು ಕೂಡ ಪಠ್ಯದಲ್ಲಿ ಹಾಕುತ್ತಿದ್ದೇವೆ. ಹೆಡ್ಗೇವಾರ್ ಅವರ ರಾಷ್ಟ್ರಭಕ್ತಿಯ ವಿಚಾರ ಸೇರಿಸಿದರೆ ಕಾಂಗ್ರೆಸ್ ನವರಿಗೆ ಹೊಟ್ಟೆಯುರಿ ಯಾಕೆ? ಅವರಿಗೆ ಏನು ತೊಂದರೆ? ಇವರ ತರ ವ್ಯಕ್ತಿ ಪೂಜೆ ಮಾಡ್ಕೊಂಡು ಇರಬೇಕಾ ಎಂದು ಪ್ರಶ್ನಿಸಿದರು.

ಆರ್ ಎಸ್‌ಎಸ್ ನಿಷೇಧ ಮಾಡಲು ಇವರ ಪೂರ್ವಜರಾದ ಇಂದಿರಾ ಗಾಂಧಿ ಹೊರಟ್ಟಿದ್ದರು‌. ಅವರ ಕೈಯಲ್ಲಿಯೇ ಅಗಿಲಿಲ್ಲ, ಇನ್ನೂ ಇವರ ಕೈಯಲ್ಲಿ ಆಗುತ್ತದೆಯೇ? ಸರ್ಕಾರದ ಪ್ರತಿಯೊಬ್ಬರು ಪರವಾಗಿ ಕೆಲಸ ಮಾಡುತ್ತಿದೆ ಎಂದು ಈಶ್ವರಪ್ಪ ಹೇಳಿದರು.

ಸಿಎಂ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಬಹಳ ದಿನದಿಂದ ಹೇಳುತ್ತಿದ್ದಾರೆ. ಹಿರಿಯ ಮಂತ್ರಿಗಳನ್ನು ಬಿಡುತ್ತಾರೆ, ಹಳಬರನ್ನು ಬಿಟ್ಟು, ಹೊಸಬರನ್ನು ತಗೋತ್ತಾರೆ. ಇವತ್ತು, ನಾಳೆ, ನಾಡಿದ್ದು, ಯುಗಾದಿ ಸಂಕ್ರಾಂತಿ, ದಸರಾ ಎಲ್ಲವೂ ಅಗಿದೆ. ಯಾವ ಮಂತ್ರಿಯೂ ಬದಲಾವಣೆ ಅಗಿಲ್ಲ. ಇವೆಲ್ಲಾ ಸೃಷ್ಟಿ ಅಷ್ಟೇ. ಮುಖ್ಯಮಂತ್ರಿ ಬದಲಾವಣೆ ಅನ್ನೋದು ಸಣ್ಣ ವಿಚಾರ ಅಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಮೇಲೆ ಸಾಕಷ್ಟು ಅಭಿವೃದ್ಧಿ ಅಗಿದೆ. ರಾಜ್ಯದ ಜನ ಮೆಚ್ಚುತ್ತಿದ್ದಾರೆ. ಕಾಂಗ್ರೆಸ್ ನವರು ಇಲ್ಲದೇ ಇರುವ ಗೊಂದಲ ಸೃಷ್ಟಿ ಮಾಡುತ್ತಾರೆ ಎಂದರು.

ಪಿಎಸ್‌ಐ ನೇಮಕಾತಿ ಅಕ್ರಮ‌ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆಈ ವಿಚಾರ ಹೊರಗೆ ಬರುತ್ತಿರಲಿಲ್ಲ. ಅವರು ಮುಚ್ಚಿ ಹಾಕುತ್ತಿದ್ದರು. ಅದಕ್ಕೆ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಇವತ್ತು ಯಾವ ಇಲಾಖೆಯ ಅಭಿವೃದ್ಧಿ ಕಾರ್ಯಗಳು ಸಹ ನಿಂತಿಲ್ಲ. ಜನರು ಸಹ ಸರ್ಕಾರದ ಕಾರ್ಯದ ಬಗ್ಗೆ ಸಂತೋಷದಿಂದ ಮಾತನಾಡುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

Gayathri SG

Recent Posts

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

5 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

17 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

41 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

41 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

54 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

57 mins ago