News Karnataka Kannada
Thursday, May 09 2024
ಶಿವಮೊಗ್ಗ

ಹಿರಿಯರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವೇ ಇಲ್ಲ: ಬಿಎಸ್‌ ವೈ

Cm Bs Yadiyurappa Main
Photo Credit :

ಶಿವಮೊಗ್ಗ: ರಾಜ್ಯದಲ್ಲಿನ ಹಿರಿಯರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಬಗ್ಗೆ ಸೋಮವಾರ ವಿಧಾನಸಭಾ ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಧಾನ ಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಗದ್ದಲ ಎಬ್ಬಿಸುತ್ತಿದ್ದಾರೆ. ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮತ್ತು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಗಲಭೆಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.

ರಾಯಣ್ಣ ಪ್ರತಿಮೆ ಧ್ವಂಸ, ಗಲಭೆ ಸಂಬಂಧ ಈಗಾಗಲೇ 23 ಮಂದಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ. ಕೃತ್ಯದಲ್ಲಿ ಶಾಮೀಲಾಗಿದ್ದವರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿರಿಗೆ ಸೂಚನೆ ನೀಡಿದ್ದಾರೆ ಎಂದರು. ಸಂಸದ ರಾಘವೇಂದ್ರ, ರುದ್ರೇಗೌಡ ಜೊತೆಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು