ಹೊಳೆಹೊನ್ನೂರು: ಹೊಳೆಹೊನ್ನೂರು ದಂತವೈದ್ಯ ಅಧಿಕಾರಿಗಳಾದ ಮೋಹನ್ ಅವರ ಮೇಲೆ ಆರೋಪಿಸಲಾಗಿರುವ ಸುಳ್ಳು ಆಪಾದನೆಯನ್ನು ಖಂಡಿಸಿ ಹಾಗೂ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಿಬ್ಬಂದಿಗಳ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಐ ಪಿ ಶಾಂತರಾಜ್ ರವರ ಮುಂದಾಳತ್ವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಬೃಹತ್ ಸಂಖ್ಯೆಯಲ್ಲಿ ಒಗ್ಗಟ್ಟು ಪ್ರದರ್ಶಿಸಿ ಮನವಿ ಪತ್ರವನ್ನು ಶಿವಮೊಗ್ಗ ಜಿಲ್ಲೆಯ ನೋಡಲ್ ಅಧಿಕಾರಿಗಳಾದ ಡಾಕ್ಟರ್ ಸೆಲ್ವಕುಮಾರ್ ಐ ಎ ಎಸ್ ಹಾಗು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ನಾಗೇಂದ್ರ ಎಫ್ ಹೊನ್ನಳ್ಳಿ ರವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷರಾದ ಡಾಕ್ಟರ್ ಸಿದ್ದನಗೌಡ.ಪಿ , ವೈದ್ಯಕೀಯ ಸಂಘದ ಕಾರ್ಯದರ್ಶಿಗಳಾದ ಡಾ. ನಾಗರಾಜ್ ನಾಯಕ್ ಹಾಗು ನೌಕರರ ಸಂಘದ ನಿರ್ದೇಶಕರಾದ ವೈ ಜೆ ಶಶಿಕುಮಾರ್, ಪ್ರಭಾಕರ,ಅಶೋಕ್, ಲಕ್ಷ್ಮಣ್ ಮತ್ತು ತಾಲೂಕ ಅಧ್ಯಕ್ಷರುಗಳು, ವಿವಿಧ ವೃತ್ತಿ ಸಂಘದ ಅಧ್ಯಕ್ಷರು,ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…
ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…