ಹೊಸ ಪೀಳಿಗೆಯನ್ನು ರಂಗಭೂಮಿ ಕಡೆಗೆ ಸೆಳೆಯಬೇಕು: ಸಚಿವ ಸುನೀಲ್ ಕುಮಾರ್

ಶಿವಮೊಗ್ಗ : ಹೊಸ ಪೀಳಿಗೆಯನ್ನು ರಂಗಭೂಮಿಯ ಕಡೆಗೆ ಸೆಳೆಯುವ ಕಾರ್ಯವನ್ನು ರಂಗಾಯಣಗಳು ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಇಂಧನ ಖಾತೆ ಸಚಿವ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.

ಅವರು ಶನಿವಾರ ಶಿವಮೊಗ್ಗ ರಂಗಾಯಣದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಮ್ಯೂರಲ್ ಆರ್ಟ್ ಗ್ಯಾಲರಿಯನ್ನು ಉದ್ಘಾಟಿಸಿ ಮಾತನಾಡಿದರು.

ಪೈಪೋಟಿಯ ಇಂದಿನ ಯುಗದಲ್ಲಿ ಯುವ ಜನರು ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಾಗಿ ಮಾರು ಹೋಗುತ್ತಿದ್ದು, ಅಂತಹ ಯುವ ಜನರಲ್ಲಿ ರಂಗ ಆಸಕ್ತಿ ಮೂಡಿಸುವ ಕಾರ್ಯ ನಡೆಯಬೇಕು. ಅವರಲ್ಲಿರುವ ಪ್ರತಿಭೆಗಳಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಕಾರ್ಯವನ್ನು ರಂಗಾಯಣ ಮಾಡಬೇಕು.

ನಾಟಕ ಅಭಿವ್ಯಕ್ತಿಯ ಅತ್ಯುತ್ತಮ ಮಾಧ್ಯಮವಾಗಿದ್ದು, ಗಾಂಧೀಜಿಯವರು ಸತ್ಯ ಹರಿಶ್ಚಂದ್ರ ನಾಟಕದಿಂದ ಪ್ರಭಾವಿತರಾಗಿದ್ದರು. ಶಿವರಾಮ ಕಾರಂತ ಅವರ ಕಾದಂಬರಿ ಆಧರಿಸಿ ನಾಟಕ ರಚಿಸುವ ಶಿವಮೊಗ್ಗ ರಂಗಾಯಣದ ಪ್ರಸ್ತಾವನೆಯನ್ನು ಮನ್ನಿಸಿ ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸಲಾಗುವುದು ಎಂದು ಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸೋಲಾರ್ ಪ್ಯಾನೆಲ್‌ಗಳನ್ನು ಅಳವಡಿಸಿ, ವಿದ್ಯುತ್ ಸ್ವಾವಲಂಬನೆ ಸಾಧಿಸುವ ಪ್ರಸ್ತಾವನೆಯನ್ನು ಸಹ ಅನುಷ್ಟಾನಗೊಳಿಸಲು ಪ್ರಯತ್ನಿಸುವುದಾಗಿ ಸಚಿವರು ತಿಳಿಸಿದರು.

ಮ್ಯೂರಲ್ ಆರ್ಟ್ ಗ್ಯಾಲರಿ: ಶಿವಮೊಗ್ಗ ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕರ್ನಾಟಕ ಚಿತ್ರ ಕಲಾ ಪರಿಷತ್ ಸಹಯೋಗದಲ್ಲಿ 40ಕ್ಕೂ ಅಧಿಕ ಮ್ಯೂರಲ್ ಕಲಾಕೃತಿಗಳನ್ನು ರಚಿಸಲಾಗಿದ್ದು, ಆಕರ್ಷಕವಾಗಿವೆ. ವಿವಿಧ ನಾಟಕಗಳ ದೃಶ್ಯಗಳು, ಸೂತ್ರದ ಗೊಂಬೆಯಾಟ, ವರ್ಲಿ ಪೈಂಟಿAಗ್ ಕಲಾಕೃತಿಗಳು, ಹತ್ತಾರು ಬಗೆಯ ಮುಖವಾಡಗಳು ಶಿವಮೊಗ್ಗ ರಂಗಾಯಣಕ್ಕೆ ಹೊಸ ರೂಪು ನೀಡಿವೆ. ಬೇರೆ ಯಾವುದೇ ರಂಗಾಯಣಗಳು ಮಾಡದ ಕಾರ್ಯವನ್ನು ಶಿವಮೊಗ್ಗ ರಂಗಾಯಣ ಮಾಡಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಧನ್ಯವಾದ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ದತ್ತಾತ್ರಿ, ರಂಗ ಸಮಾಜದ ಸದಸ್ಯ ಹಾಲಸ್ವಾಮಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಉಪಸ್ಥಿತರಿದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

18 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

32 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

45 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago