ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಪತ್ತೆ

ಶಿವಮೊಗ್ಗ: ಕರ್ನಾಟಕದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು,ಇಂದು ಆರೋಗ್ಯ ಇಲಾಖೆ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ, ನಿನ್ನೆ ಶಿವಮೊಗ್ಗ ಜಿಲ್ಲೆ ಹಾಗೂ ಶಿರಸಿಯ 19 ಜನರ ರಕ್ತದ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು ಫೆಬ್ರವರಿ 3 ರಂದು ಶಿವಮೊಗ್ಗದಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳನ್ನು ಭೇಟಿ ಮಾಡಿ ಹೆಚ್ಚಿನ ಸಾವುಗಳನ್ನು ತಪ್ಪಿಸಲು ಅಗತ್ಯವಾದ ಕ್ರಮಗಳ ಕುರಿತು ಚರ್ಚಿಸಿದ್ದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೂವರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಹೊಸನಗರ ತಾಲೂಕಿನ ಎಂಟು ಮಂದಿಯಲ್ಲಿ ಮಂಗನ ಕಾಯಿಲ್ ಪಾಸಿಟಿವ್ ಕಾಣಿಸಿಕೊಂಡಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಈವರಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 64 ಕ್ಕೆ ಏರಿದೆ. ಈ ಪೈಕಿ 37 ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲಾಗಿದ್ದರೆ, 24 ಪ್ರಕರಣಗಳು ಶಿವಮೊಗ್ಗ ಮತ್ತು ಮೂರು ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪತ್ತೆಯಾಗಿವೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗನ ಕಾಯಿಲೆಗೆ ಒಟ್ಟು ಇಬ್ಬರು ಬಲಿಯಾಗಿದ್ದಾರೆ. ಸದ್ಯ, ಸಕ್ರಿಯ 37 ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ.

ರಾಜ್ಯದಲ್ಲಿ ಮಂಗನ ಖಾಯಿಲೆ ಆತಂಕ ಶುರುವಾಗಿದೆ. ನವೆಂಬ‌ರ್ ನಿಂದ ಮೇ ತಿಂಗಳ ಅವಧಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಹಠಾತ್ ಜ್ವರ, ಶರೀರದಲ್ಲಿ ತೀವ್ರ ಸ್ನಾಯುಗಳ ನೋವು, ತಲೆ ನೋವು ಇತ್ಯಾದಿ ರೋಗ ಲಕ್ಷಣಗಳಾಗಿವೆ. ರೋಗ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ರೋಗ ಲಕ್ಷಣ ಕಂಡು ಬಂದ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ. ಪ್ರಾಥಮಿಕ ಚಿಕಿತ್ಸೆ ಪಡೆದು KFD ಪರೀಕ್ಷೆಗೆ ರಕ್ತ ಮಾದರಿಯನ್ನು ನೀಡುವಂತೆ ಆರೋಗ್ಯ ಇಲಾಖೆ‌ ಸೂಚನೆ ನೀಡಿದೆ. ಕಾಡಿಗೆ ಹೋಗುವ ಮುನ್ನ ಇಲಾಖೆ ಉಚಿತವಾಗಿ ನೀಡುವ DEPA ತೈಲವನ್ನು ಲೇಪಿಸಿಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ.

Ashika S

Recent Posts

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ…

9 mins ago

ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿದ ಸಯಾಮಿ ಅವಳಿ ಮಕ್ಕಳಿಗೆ ಜನ್ಮ

ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ…

20 mins ago

ಕೋವಿಶೀಲ್ಡ್ ನಂತೆ ‘ಕೋವ್ಯಾಕ್ಸಿನ್’ ಕೂಡ ಅಡ್ಡಪರಿಣಾಮಗಳನ್ನು ಹೊಂದಿದೆ: ವರದಿ

ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ…

30 mins ago

ಹಾವುಗಳ ರಕ್ಷಣೆಗೆ ಸಹಾಯವಾಣಿ ಬಿಡುಗಡೆ ಮಾಡಿದ ಬೆಂಗಳೂರು ಮಹಾನಗರ ಪಾಲಿಕೆ

ಹಾವುಗಳ ರಕ್ಷಣೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಡಿಐಪಿಆರ್‌ ಕರ್ನಾಟಕ ಎಕ್ಸ್‌ ಖಾತೆಯಲ್ಲಿ…

39 mins ago

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಪ್ರಾರಂಭ

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

53 mins ago

ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ‌ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

75 ವರ್ಷಕ್ಕೆ ಸಕ್ರಿಯ ರಾಜಕಾರಣದಿಂದ ಬಿಜೆಪಿಯ ಅನೇಕ ಮುಖಂಡರಿಗೆ ನಿವೃತ್ತಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಂದಿನ ವರ್ಷ 75 ತುಂಬುತ್ತದೆ.…

1 hour ago