ಯದ್ವಾತದ್ವ ಚಲಿಸಿದ ಕಾರು: 2 ಆಟೋ, ಒಂದು ಖಾಸಗಿ ಬಸ್ ಜಖಂ

ಶಿವಮೊಗ್ಗ: ಕಾರೊಂದು ಯದ್ವಾತದ್ವ ಚಲಿಸಿ 2 ಆಟೋ, ಒಂದು ಖಾಸಗಿ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ  ಘಟನೆ ಭದ್ರಾವತಿಯ ಅಂಬೇಡ್ಕರ್ ಸರ್ಕಲ್​ನ ಬಸ್ ನಿಲ್ದಾಣದ ಬಳಿ ರಾತ್ರಿ ನಡೆದಿದೆ.

ಅಪಘಾತದಲ್ಲಿ ಆಟೋ ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಿಯಂತ್ರಣ ತಪ್ಪಿದ ಕಾರು ಅರಂಭದಲ್ಲೇ ಅಂಬೇಡ್ಕರ್ ಸರ್ಕಲ್ ಪ್ರತಿಮೆ ಬಳಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿಯಾಗಿತ್ತು. ಬಳಿಕ ಖಾಸಗಿ ಬಸ್ ಹಾಗೂ 2 ಆಟೋಗಳಿಗೆ ಭಯಾನಕವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಆಟೋ ಡ್ರೈವರ್ ಸೇರಿ ಇಬ್ಬರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಕಾರು ಡಿಕ್ಕಿಯಾಗಿದ್ದರಿಂದ ಒಂದು ಆಟೋ ಸಂಪೂರ್ಣ ಜಖಂ ಆಗಿದ್ದು ಇನ್ನೊಂದಕ್ಕೆ ಸ್ವಲ್ಪ ಹಾನಿಯಾಗಿದೆ. ಅದರಂತೆ ಬಸ್​ನ ಮುಂಭಾಗವೂ ಹಾನಿಯಾಗಿದೆ.

ಕಾರು ಡ್ರೈವರ್ ಮದ್ಯ ಸೇವನೆ ಮಾಡಿ ಕಾರು ಚಲಾಯಿಸಿದ್ದರಿಂದ ಈ ಅಪಘಾತಗಳು ನಡೆದಿವೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಈ ಸಂಬಂಧ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ashika S

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

10 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

30 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago