ರೈಲಿಗೆ ತಲೆಕೊಟ್ಟು ‘ದ್ವಿತೀಯ ಪಿಯುಸಿ’ ವಿದ್ಯಾರ್ಥಿನಿ ಆತ್ಮಹತ್ಯೆ !

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷಾ ಭಯದಿಂದ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಬಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಭೂಮಿಕ (18) ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ತಾಳಗುಪ್ಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ದ್ವಿತೀಯ ಪಿಯುಸಿಯ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಒಂದು ಪರೀಕ್ಷಾ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ashitha S

Recent Posts

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

16 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

44 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

1 hour ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

2 hours ago