News Karnataka Kannada
Wednesday, April 24 2024
Cricket
ಶಿವಮೊಗ್ಗ

50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಲಿದೆ: ಬೊಮ್ಮಾಯಿ

Shivamogga
Photo Credit :

ಶಿವಮೊಗ್ಗ: ಪರ್ಸಂಟೆಜ್ ನಿಯಂತ್ರಣಕ್ಕೆ ೫೦ ಕೋ.ರೂ.ವೆಚ್ಚದ ಕಾಮಗಾರಿಗಳಿಗೆ ಅನುಮೋಧನೆ ನೀಡುವ ಸಲುವಾಗಿ ಶೀಘ್ರದಲ್ಲೇ ಉನ್ನತಮಟ್ಟದ ಆಯೋಗ ರಚಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉನ್ನತ ಮಟ್ಟದ ಆಯೋಗವು ಕಾಮಗಾರಿಯ ರೂಪುರೇಷೆ ಬಗ್ಗೆ ಪರಿಶೀಲನೆ ನಡೆಸಿ 50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಲಿದೆ. ಒಂದು ವೇಳೆ ಮೌಖಿಕ ಆದೇಶದ ಮೇಲೆ ಕಾಮಗಾರಿಗಳು ನಡೆದರೆ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಿಡಿಓ ಹಾಗೂ ಇಓ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಒತ್ತಡ ಹೆಚ್ಚಾದಲ್ಲಿ ಜಿಲ್ಲಾಮಟ್ಟದ ಸಮಿತಿಯನ್ನು ರಚಿಸಲು ಪ್ರಯತ್ನಿಸಲಾಗುವುದು ಎಂದರು.

ತೆರಿಗೆ ಸಂಗ್ರಹ ಹೆಚ್ಚಳವಾಗುತ್ತಿರುವುದರಿಂದ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ತೆರಿಗೆ ಸಂಗ್ರಹಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ 15 ಸಾವಿರ ಕೋ.ರೂ. ತೆರಿಗೆ ಸಂಗ್ರಹವಾಗಿದೆ. ತೆರಿಗೆ ಸಂಗ್ರಹ ಹೆಚ್ಚಳವಾಗಿರುವುದರಿಂದ ಕೇಂದ್ರ ಸರ್ಕಾರವು ಸಹ ಹೆಚ್ಚಿನ ಅನುದಾನ ನೀಡಿದೆ ಎಂದರು.

ಕರ್ನಾಟಕ ಉದಯವಾದ ನಂತರ ಇದೇ ಪ್ರಥಮ ಬಾರಿಗೆ ತೆರಿಗೆ ಹೆಚ್ಚಳವಾಗಿರುವುದು ದಾಖಲೆಯಾಗಿದೆ. ಆದಾಯ ಹೆಚ್ಚಳವಾಗುತ್ತಿದ್ದರೂ ವೆಚ್ಚವನ್ನು ಕಡಿಮೆ ಮಾಡಿರುವುದರಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲು ಕಾರಣವಾಗಿದೆ ಎಂದರು.

ಅರಣ್ಯ ಭೂಮಿಯ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲು ಮೇ ಮೊದಲ ವಾರದಲ್ಲಿ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವಿಶೇಷ ಸಭೆಯನ್ನು ಕರೆಯಲಾಗುವುದು. ಮಲೆನಾಡು ಮತ್ತು ಅರೆಮಲೆನಾಡು ಪ್ರದೇಶದ ಅರಣ್ಯ ಭೂಮಿಯ ಒತ್ತುವರಿಯನ್ನು ಬಗೆಹರಿಸಲು ಮತ್ತು ಅರಣ್ಯ ಒತ್ತುವರಿ ಸ್ಪಷ್ಟನೆ ಹಾಗೂ ಕಾನೂನು ಬದಲಾವಣೆ ತರಲು 4-5 ಜಿಲ್ಲೆಯ ಜನಪ್ರನಿಧಿಗಳು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಈ ಸಭೆಯಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು ಮತ್ತು ಕೆಲವೊಂದಕ್ಕೆ ತಕ್ಷಣ ಪರಿಹಾರ ನೀಡಲಾಗುವುದು ಎಂದರು.

ಬೆಂಗಳೂರು ಹೊರತುಪಡಿಸಿ ಐಟಿ-ಬಿಟಿ ಕ್ಷೇತ್ರ ಬೆಳೆಯುವ ಅವಕಾಶ ಶಿವಮೊಗ್ಗ ಜಿಲ್ಲೆಗೆ ಇದ್ದು, ಇದಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಮಗ್ರ ಕರ್ನಾಟಕದ ಅಭಿವೃದ್ಧಿಯಾಗಬೇಕು. ಎಲ್ಲಾ ಭಾಗದ ಅಭಿವೃದ್ಧಿಯಾಗಬೇಕೆಂಬುದು ನಮ್ಮ ಚಿಂತನೆಯಾಗಿದೆ.

ಬಜೆಟ್‌ನಲ್ಲಿ ಘೋಷಿಸಿದಂತೆ ಶೇ.75 ರಷ್ಟು ಯೋಜನೆಗಳ ಅನುಷ್ಟಾನಕ್ಕೆ ಆದೇಶ ನೀಡಲಾಗಿದೆ. ಒಟ್ಟಾರೆಯಾಗಿ ಅಭಿವೃದ್ಧಿಗಳ ಅನುಷ್ಠಾನಕ್ಕೆ ಸರ್ಕಾರದ ತೀವ್ರ ಆಸಕ್ತಿ ಹಾಗೂ ಬದ್ಧತೆ ಹೊಂದಿದೆ ಎಂದರು.

ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಖಾಸಗೀಕರಣಗೊಂಡಲ್ಲಿ ಕಾರ್ಖಾನೆಗೆ ಬಿಟ್ಟು ಉಳಿದ ಜಾಗವನ್ನು ಬೇರೆ ಕಾರ್ಖಾನೆಗಳಿಗೆ ಉಪಯೋಗಿಸಲಾಗುವುದು ಮತ್ತು ಎಂಪಿಎಂ ಕಾರ್ಖಾನೆಯನ್ನು ಪುನಃ ಆರಂಭಿಸಲು ಟೆಂಡರ್ ಕರೆಯಲಾಗಿದ್ದು, ಇದುವರೆಗೂ ಯಾರು ಟೆಂಡರ್ ಹಾಕದಿರುವುದರಿಂದ ಮುಂದೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಗಟ್ಟಿಯಾಗಿದೆ. ಇನ್ನಷ್ಟು ಗಟ್ಟಿಗೊಳಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಮತ್ತು ಅಭಿವೃದ್ಧಿ ಬಗ್ಗೆ ಚರ್ಚೆ ನಡೆದಿದೆ. ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗಿರುವುದರಿಂದು ಚುರುಕುಗೊಳಿಸಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು