ಶಿವಮೊಗ್ಗ

ಆಗುಂಬೆ: ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ

ಶಿವಮೊಗ್ಗ, ಜು.10: ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು.

ಈ ಅವಧಿಯಲ್ಲಿ ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಕಾರ್ಕಳ-ಮಂಗಳೂರು, ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಕಾರ್ಕಳ-ಮಂಗಳೂರು, ತೀರ್ಥಹಳ್ಳಿ-ಮಾಸ್ತಿಕಟ್ಟೆ- ಕುಂದಾಪುರ ಮಾರ್ಗವನ್ನು ವಾಹನ ಸಂಚಾರಕ್ಕೆ ಬಳಸುವಂತೆ ಅವರು ತಿಳಿಸಿದ್ದಾರೆ.

Sneha Gowda

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

13 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

46 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

1 hour ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago