ಶಿವಮೊಗ್ಗ, ಏ.5: ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.
ಮತ ಕ್ಷೇತ್ರವಾರು ಎಂಸಿಸಿ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಕಚೇರಿಯಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.
ಜಿಲ್ಲೆಯಾದ್ಯಂತ ಅಬಕಾರಿ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ವಿರುದ್ದ ಅಬಕಾರಿ ಕಾಯ್ದೆ ಸೆಕ್ಷನ್ 15 ಎ ರಡಿ ಪ್ರಕರಣಗಳನ್ನು ದಾಖಲಿಸುವಂತೆ ಸೂಚನೆ ನೀಡಿದರು.
ಜಿ.ಪಂ ಸಿಇಓ ಸ್ನೇಹಲ್ ಲೋಖಂಡೆ ಮಾತನಾಡಿ, ಎಂಸಿಸಿ ನೋಡಲ್ ಅಧಿಕಾರಿಗಳು, ಎಫ್ಎಸ್ಟಿ, ಎಸ್ಎಸ್ಟಿ ಅಧಿಕಾರಿಗಳು ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರತಿ ದಿನ ನಿಗದಿತ ಅವಧಿಯೊಳಗೆ ವರದಿಯನ್ನು ನೀಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಎಲ್ಲ ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಕೈಗೊಳ್ಳಬೇಕು. ನಗದು ಚಲನೆ ಕುರಿತು ಹೆಚ್ಚಿನ ನಿಗಾವಹಿಸಿ, ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…