ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ದೊರೆಯದೇ ಹೋದಾಗ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್ ಎಲ್ಲರ ನಿರೀಕ್ಷೆಯಂತೆ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ನಾನು ನನ್ನ ಸ್ನೇಹಿತರ ಜೊತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ಸ್ಪಷ್ಟ ಪಡಿಸಿದರು.
ವಿಧಾನಸಭಾ ಚುನಾವಣೆ ವೇಳೆಯೇ ಕಾಂಗ್ರೆಸ್ ಸೇರಬೇಕಿತ್ತು. ಆಗ ಜೆಡಿಎಸ್ ನಿಂದ ನಾನು ಸ್ಪರ್ಧೆಗಿಳಿಯಬೇಕಾಯ್ತು. ಮುಂಬರುವ ಚುನಾವಣೆಯಲ್ಲಿ ಸಮಯ, ಶಕ್ತಿ ನೀಡಿ ದುಡಿಯುವ ನಿಲುವನ್ನು ಹೊಂದಿದ್ದೇನೆ. ಮುಂಬರುವ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ ಎಂದರು. ಆಗ ಅನಿವಾರ್ಯವಾಗಿ ಜೆಡಿಎಸ್ ಸೇರ್ಪಡೆಯಾಗಿದ್ದೆ. ಇದೀಗ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಿದ್ದೇನೆ. ಇದು ನನ್ನ ಕೊನೆಯ ಬಸ್ ಸ್ಟಾಪ್ ಎಂದು ತಿಳಿಸಿದ್ದಾರೆ.