ಜ.12 ರಂದು ಯುವ ನಿಧಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿರುವ ಸಿಎಂ

ಶಿವಮೊಗ್ಗ:  5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಸ್ವಾಮಿ ವಿವೇಕಾನಂದ ಜಯಂತಿ ದಿನವಾದ ಜ.12 ರಂದು ನಗರದ ಪ್ರೀಡಂ ಪಾರ್ಕ್ ನಲ್ಲಿ ಯುವ ನಿಧಿ ಗ್ಯಾರಂಟಿ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು.

ಈಗಾಗಲೇ ಸರ್ಕಾರದಿಂದ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಸೌಲಭ್ಯ ಯಾರಿಗೆ ತಲುಪಿಲ್ಲ ಅದರ ಬಗ್ಗೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಗಮನಿಸಿ ಪರಿಹರಿಸಲಾಗುತ್ತಿದೆ. ಅಧಿಕಾರಿಗಳೇ ಹೋಗಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲಿದ್ದಾರೆ ಎಂದರು.

ಯೋಜನೆಗೆ ಡಿ. 26 ರಿಂದ ನೋಂದಣಿ ಆರಂಭವಾಗಲಿದೆ. ನೋಂದಣಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಿ ಸೌಲಭ್ಯ ಪಡೆಯಬೇಕು. ರಾಜ್ಯ ಮಟ್ಟದ ಕಾರ್ಯಕ್ರಮವಾಗಿರುವುದರಿಂದ ಇದು ದೊಡ್ಡಮಟ್ಟದಲ್ಲಿ ನಡೆಯಲಿದೆ. ಅಂದಿನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಸಚಿವ ಸಂಪುಟದ ಸಚಿವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago