ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ್ ಖಂಡ್ರೆ ಅವರ ವಿಚಾರವಾಗಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಆಡಿರುವ ಮಾತು ಕಾಂಗ್ರೆಸ್-ಬಿಜೆಪಿ ಪಡೆ ನಡುವೆ ಕಾಳಗ ಸೃಷ್ಟಿಸಿದೆ. ಆರಗ ಜ್ಞಾನೇಂದ್ರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೆರಳಿ ನಿಂತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಮೈಬಣ್ಣ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಗ ಜ್ಞಾನೇಂದ್ರ ದೂರು ದಾಖಲಿಸಲಾಗಿದೆ. ದಲಿತ ಮುಖಂಡ ಹರ್ಷೇಂದ್ರ ಕುಮಾರ್ ಎನ್ನುವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಆರಗ ಜ್ಞಾನೇಂದ್ರ ವಿರುದ್ಧ ಜಾತಿ ನಿಂದನೆ ದೂರು ನೀಡಿದ್ದಾರೆ.