“ಅಗ್ನಿಪಥ್ “ಯೋಜನೆ ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೈಲು ತಡೆ ಚಳುವಳಿ

ಶಿವಮೊಗ್ಗ: ದೇಶದ ಭದ್ರತೆಗೆ ಅಪಾಯ, ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುತ್ತಿರುವ “ಅಗ್ನಿಪಥ್ “ಯೋಜನೆ ವಿರೋಧಿಸಿ ಇಂದು ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೈಲು ತಡೆ ಚಳುವಳಿನಡೆಸಿದ 40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗ ಅಪಾಯಕಾರಿಯಾಗಬಲ್ಲ ‘ಅಗ್ನಿಪಥ್’ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಬೇಕು. ಈಗಿರುವ ಯಥಾಸ್ಥಿತಿಯಲ್ಲಿಯೇ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ. ಈಗಾಗಲೇ ಕರಾಳ ಕೃಷಿ ಕಾಯ್ದೆಗಳನ್ನು ತರಲು ಹೋಗಿ ದೇಶದ ಅನ್ನದಾತ ರೈತರನ್ನು ಬಲಿಕೊಡಲು ಹೊರಟಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರ, ಈಗ ಸೇನಾ ನೇಮಕಾತಿಯಲ್ಲಿ “ಅಗ್ನಿಪಥ್” ಎಂಬ ಅವೈಜ್ಞಾನಿಕ ಯೋಜನೆಯನ್ನು ಘೋಷಿಸಿ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವದನ್ನು ಖಂಡನೀಯ ಎಂದರು.ನಗರದ ರೈಲ್ವೆ ನಿಲ್ದಾಣದಲ್ಲಿ ರೈಲು ತಡೆ ಚಳವಳಿ ನಡೆಸಲಾಗಿದ್ದು, ಸಂದರ್ಭದಲ್ಲಿ 40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ ಎಂದು ಪ್ರಶ್ನಿಸಿದರು.

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ ಎಂದು ಪ್ರಜ್ಞಾವಂತ ಯುವಕರು ಈ ಸರ್ಕಾರಕ್ಕೆ ಛೀಮಾರಿ ಹಾಕುತಿದ್ದಾರೆ ಎಂದರು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆ.

ಭ್ರಷ್ಟ ಹಾಗೂ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡುತ್ತಿದೆ. ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಸರ್ಕಾರ ಮುಂದಿನ ದಿನಗಳಲ್ಲಿ ಇತರೆ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಟಿರುವುದು ಮುನ್ಸೂಚನೆ ನೀಡುತ್ತದೆ. ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ “ಜೈ ಜವಾನ್ ಜೈ ಕಿಸಾನ್” ಎಂಬ ಘೋಷಣೆಗೆ ಜನವಿರೋಧಿ ಬಿಜೆಪಿ ಸರ್ಕಾರ ” ಅಗ್ನಿಪಥ್” ಎಂಬ ಯೋಜನೆಯ ಮುಖಾಂತರ ಅಗ್ನಿಸ್ಪರ್ಶ ಮಾಡುತ್ತಿರುವುದನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದರು.

Ashika S

Recent Posts

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

3 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

27 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

47 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago