News Karnataka Kannada
Thursday, May 02 2024
ಶಿವಮೊಗ್ಗ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕೆ.ಎಸ್‌ ಈಶ್ವರಪ್ಪ ವಿರುದ್ದ ಎಫ್‌ಐಆರ್

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್.ಈಶ್ವರಪ್ಪನವರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ.
Photo Credit : NewsKarnataka

ಶಿವಮೊಗ್ಗ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್.ಈಶ್ವರಪ್ಪನವರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ.

ಏ.೫ ರಂದು ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ, ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಯಲ್ಲಿ ಸುಮಾರು ೫೦ ರಿಂದ ೬೦ ಜನರನ್ನು ಸೇರಿಸಿಕೊಂಡು ೫೦ ಕುರ್ಚಿಗಳು ಹಾಗೂ ಹ್ಯಾಂಡ್‌ ಮೈಕ್‌ ಒಳಗೊಂಡಂತೆ ಸಣ್ಣ ವೇದಿಕೆ ರೀತಿಯಲ್ಲಿ ಸಭೆ ನಡೆಸಿ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿದ್ದಾರೆ.

ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿಯನ್ನು ಈ ಕಾ‍ರ್ಯಕ್ರಮ ನಡೆಸಲು ಪಡೆದಿರುವುದಿಲ್ಲ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಸಂಜ್ಞೆಯ ಅಪರಾದ ಪ್ರಕರಣವಾದ್ದರಿಂದ ನ್ಯಾಯಾಲಯದ ಅನುಮತಿ ಪಡೆದು ಕೆ.ಎಸ್‌ ಈಶ್ವರಪ್ಪ ರವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು