News Karnataka Kannada
Monday, May 13 2024
ಶಿವಮೊಗ್ಗ

ಶಿವಮೊಗ್ಗದಲ್ಲಿ ಹೆದ್ದಾರಿಯಲ್ಲೇ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ

New Project 2024 01 01t103514.050
Photo Credit : News Kannada

ಶಿವಮೊಗ್ಗ: ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದಾರೆ. ಈ ಘಟನೆ ಸಂಬಂಧ ಪುಂಡಾಟ ಮೆರೆದ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ ಏರ್ ಗನ್ ತೆಗೆದಂತ ಒಬ್ಬಾತ, ಅದರಿಂದ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದಿದ್ದಾನೆ. ಹೀಗೆ ಹುಚ್ಚಾಟ ಮೆರೆದ ವೀಡಿಯೋವನ್ನು ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲಾತಾಣದಲ್ಲಿ ವೈರಲ್‌ ಮಾಡಿದ್ದಾರೆ.

ವೀಡಿಯೋ ವೈರಲ್ ಆಗುತ್ತಿದ್ದಂತೆ, ತುಂಗಾ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಸಿರಗನಹಳ್ಳಿಯ ಹರ್ಷ ಪಟೇಲ್(23) ಹಾಗೂ ಅಜ್ಜಂಪುರದ ಅಭಿಷೇಕ್ (23) ಎಂಬುದಾಗಿ ಗುರುತಿಸಲಾಗಿದೆ. ಈ ಆರೋಪಿಗಳ ವಿರುದ್ಧ ಅಜಾಗರೂಕತೆ ಹಾಗೂ ಬೇಜವಾಬ್ದಾರಿ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಮ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು