ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಆಗಮನ: ಬಿಎಸ್‌ವೈ ಪ್ರಯಾಣ

ಶಿವಮೊಗ್ಗ: ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಗುರುವಾರ ಆಗಮಿಸಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳಿದ ಇಂಡಿಗೋ ವಿಮಾನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಎಂಬಿ ಪಾಟೀಲ್ ಜೊತೆ ಆ ಭಾಗದ ಜನ ಪ್ರತಿನಿಧಿಗಳು ಪ್ರಯಾಣಿಸಿದ್ದರು.

ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಇಂದಿನಿಂದ ಪ್ರಯಾಣ ಆರಂಭವಾಗಿದೆ. ಶಿವಮೊಗ್ಗದಲ್ಲಿ ಇಳಿದ ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮೂಲಕ ಸ್ವಾಗತ ಮಾಡಲಾಯಿತು. ವಿಮಾನದಲ್ಲಿ ಆಗಮಿಸಿದ ಗಣ್ಯರನ್ನು ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಸ್ವಾಗತಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್ ವೈ ಅವರು, ನಮ್ಮ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರೈತರು ಕಾರಣ. ಸಣ್ಣ ಸಮಸ್ಯೆ ಇಲ್ಲದೇ ಜಮೀನು ಬಿಟ್ಟುಕೊಟ್ಟಿದ್ದಾರೆ. ಇವತ್ತು ನನ್ನ ಜೊತೆ ಕೆಲ ರೈತರನ್ನೂ ವಿಮಾನದಲ್ಲಿ ಕರೆದುಕೊಂಡು ಹೋಗುತ್ತಿದ್ದೇನೆ. ಏರ್‌ಪೋರ್ಟ್ ಆಗಲು ಕಾರಣರಾದ ಎಲ್ಲರಿಗೂ ಅಭಿನಂದನೆಗಳು. ಸಂಸದ ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ಆಗಿದ್ದಾಗಿನ ಕನಸು ನನಸಾಗಿರುವುದು ಬಹಳ ಸಂತೋಷ ತಂದಿದೆ ಎಂದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago