ಶಿವಮೊಗ್ಗದಲ್ಲಿ ವರ್ಷದ ಮೊದಲ ಕೆಎಫ್‌ಡಿ ಕೇಸ್‌ ಪತ್ತೆ

ಶಿವಮೊಗ್ಗ: ಮಂಗನ ಕಾಯಿಲೆ (ಕೆಎಫ್‌ಡಿ) ಮೊದಲ ಪ್ರಕರಣವು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಪತ್ತೆಯಾಗಿದೆ. ಇದರ ಕುರಿತು ಆರೋಗ್ಯ ಇಲಾಖೆಯೂ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ.

ಜಲ್ಲೆಯ ತೀರ್ಥಹಳ್ಳಿ ತಾಲೂಕಿನ ಶೇಡ್ಗಾರ್ ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಯ RTPCR ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್‌ ಕಾಣಿಸಿಕೊಂಡಿರುವ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಗ್ರಾಮವು ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಪತ್ತೆಯಾಗಿವೆ.

ಈ ಮಂಗನ ಕಾಯಿಲೆಗೆ ಇದುವರೆಗೆ ಯಾವುದೇ ಲಸಿಕೆ ಪತ್ತೆ ಹಚ್ಚಿಲ್ಲ. ಕೇವಲ ಬೂಸ್ಟರ್ ಡೋಸ್ ಹಾಗೂ ಮುನ್ನೆಚ್ಚರಿಕೆ ಕ್ರಮಗಳೇ ಇದಕ್ಕೆ ಸೂಕ್ತ ಮದ್ದು. ಈ ಕಾಯಿಲೆ ಪತ್ತೆಯಾಗಿ 6-7 ದಶಕಗಳೇ ಸಮೀಸುತ್ತಿದ್ದರೂ ಇದುವರೆಗೂ ಯಾವುದೇ ಸರ್ಕಾರಗಳು ಆಗಲಿ, ವಿಜ್ಞಾನಿಗಳಾಗಲಿ ಇದಕ್ಕೆ ಲಸಿಕೆ ಕಂಡುಹಿಡಿಯಲಿಲ್ಲ. ಈ ರೋಗ ಸಾಮಾನ್ಯವಾಗಿ ಜನವರಿಯಿಂದ ಜೂನ್‍ವರೆಗೆ ಮಾತ್ರ ಕಾಣಿಸಿಕೊಳ್ಳುತ್ತದೆ. ಈ ಅವಧಿಯಲ್ಲಿ ಸ್ವಲ್ಪ ಮುನ್ನೆಚ್ಚರಿಕೆ ವಹಿಸಿದರೆ ಬಚಾವ್ ಆಗಬಹುದು ಎಂದು ಹೇಳುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.

Ramya Bolantoor

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

4 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

20 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

44 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago