News Karnataka Kannada
Monday, April 29 2024
ಶಿವಮೊಗ್ಗ

ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ: ಸಿಎಂ

ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
Photo Credit : News Kannada

ಶಿವಮೊಗ್ಗ: ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಲಮ ಪ್ರಭು  ಅವರ ಕೊಡುಗೆ ಅಸಾಮಾನ್ಯವಾಗಿದೆ. ಹೀಗಾಗಿ ಮಧು ಬಂಗಾರಪ್ಪ ಅವರು ಸೂಚಿಸಿದಂತೆ ಅವರ ಹೆಸರನ್ನು ಇಡುವುದು ಸೂಕ್ತ ಎಂದು ಭಾವಿಸಿದ್ದೇನೆ ಎಂದು ಹೇಳಿದರು.

ಸಿಎಂ ಭಾಷಣಕ್ಕೂ ಮೊದಲು ಮಾತನಾಡಿ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 12ನೇ ಶತಮಾನದಲ್ಲಿ ಒಬ್ಬ ಪ್ರಸಿದ್ಧ ಕವಿ, ಹೆಸರಾಂತ ತತ್ವಜ್ಞಾನಿಯಾಗಿದ್ದ ಅಲ್ಲಮ ಪ್ರಭುಗಳು ನಮ್ಮ ಶಿವಮೊಗ್ಗ ಜಿಲ್ಲೆಯವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಹೀಗಾಗಿ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರಿಡಬೇಕು ಎಂದು ವೇದಿಕೆ ಮೇಲಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಈ ವೇಳೆ ಬಿಜೆಪಿ ಶಾಸಕ ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹೋರಾಟಗಾರ ಚಂದ್ರಶೇಖರ್ ಅಜಾದ್ ಹೆಸರಿಡಬೇಕು. ಈ ಹಿಂದೆಯೇ ಬಿಎಸ್‌ವೈ ಪ್ರಸ್ತಾಪಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ಈ ಫ್ರೀಡಂ ಪಾರ್ಕ್‌ಗೆ ಚಂದ್ರಶೇಖರ್‌ ಅಜಾದ್ ಹೆಸರಿಡಿ ಎಂದರು. ಈ ವೇಳೆ ಬೇಡ ಬೇಡ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಕಾರ್ಯಕರ್ತರು ಕೂಗಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ನಗರದಲ್ಲಿ ಈ ಫ್ರೀಡಂ ಪಾರ್ಕ್ ಮಾಡಿದ್ದೆ. ಶಾಸಕರಾದ ಚೆನ್ನಬಸಪ್ಪನವರೇ, ಅಲ್ಲಮ ಪ್ರಭು ನಿಮ್ಮ ಜಿಲ್ಲೆಯವರು. ನಿಮ್ಮ ಊರಿನವರು ಕಣ್ರೀ, ಈಗ ನೀವೇ ಹೇಳಿ ಈ ಫ್ರೀಡಂ ಪಾರ್ಕ್‌ಗೆ ಯಾರ ಹೆಸರಿಡಬೇಕು? ನನಗಂತೂ ಮಧು ಬಂಗಾರಪ್ಪ ಅವರು ಹೇಳಿದಂತೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ಟಾಂಗ್ ಕೊಟ್ಟರು.

ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಸಚಿವ ನಾಗೇಂದ್ರ, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು