News Karnataka Kannada
Saturday, May 18 2024
ಶಿವಮೊಗ್ಗ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ಟೇಬಲ್

Head constable commits suicide by hanging himself
Photo Credit : News Kannada

ಶಿವಮೊಗ್ಗ: ನಿನ್ನೆ ಕರ್ತವ್ಯ ಮುಗಿಸಿಕೊಂಡು ಬಂದಿದ್ದ ಸಂಚಾರಿ ಪಶ್ಚಿಮ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿನೋಬ ನಗರದ ಚೌಕಿ ಹತ್ತಿರವಿರುವ ಮನೆಯಲ್ಲಿ ಜಯಪ್ಪನವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ.

ಮೂರು ದಿನಗಳ ಹಿಂದೆ ಪತ್ನಿ ಮಿದುಳು ಜ್ವರದಿಂದ ಅಸುನೀಗಿದ್ದರು. ಈ ನೋವು ಜಯಪ್ಪನವರಲ್ಲಿ ಅಗಾಧವಾಗಿ ಬೇರೂರಿತ್ತು ಎಂದು ಹೇಳಲಾಗಿದೆ. ಪತ್ನಿಯ ಅಗಲಿಕೆಯಿಂದ ಜಯಪ್ಪ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಅವರ ಆಪ್ತವಲಯ ಹೇಳುತ್ತಿದೆ.

ಕೆಲಸ ಮುಗಿಸಿಕೊಂಡು ಮನೆಗೆ ಹೋದ ಜಯಪ್ಪ ಸಮವಸ್ತ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಪ್ಪನವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ವಿನೋಬ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ.
ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು