11 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಶಿವಮೊಗ್ಗ: ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ 11 ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯೂ ಸೇರ್ಪಡೆಗೊಂಡಿದೆ.

ಬೆಳಗಾವಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಸಂಭವ್ಯವಿದೆ.

ಬಾಗಲಕೋಟೆ, ಚಿತ್ರದುರ್ಗ, ಗದಗ ಮತ್ತು ಮೈಸೂರಿನಲ್ಲಿ ಚದುರಿದ ಮಳೆ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ ರಾಯಚೂರು, ಚಾಮರಾಜ್ ನಗರ ಮತ್ತು ಮಂಡ್ಯದಲ್ಲಿ ತುಂತುರು ಮಳೆ ಬೀಳುವ ಸಾಧ್ಯತೆ ಇದೆ. ಕಲ್ಬುರ್ಗಿಯಲ್ಲಿ ಅತಿಸಾಧಾರಣ ಮಳೆ ಬೀಳುವ ಸಂಭವವಿದೆ.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆಗುಂಬೆ, ಹೊಸನಗರದ ಸೊನಾಲೆ, ತ್ರಿಣಿವೆ, ಸುಳಗೋಡು, ಮೇಲಿನ ಬೆಸಿಗೆ, ನಗರ, ಮುಂಬಾರು ತೀರ್ಥಹಳ್ಳಿಯ ಹಾದಿಗಲ್ಲು, ಬಿದರಗೋಡು, ಹೊನ್ನೆತಾಳುವಿನಲ್ಲಿ ಉತ್ತಮ ಮಳೆಯಾಗಿದೆ.

ಜಿಲ್ಲೆಯ ಪ್ರಮುಖ ಜಲಾಶಯಗಳ ಮಟ್ಟ
ಚಿಕ್ಕಮಗಳೂರಿನ 10 ಗ್ರಾಮಪಂಚಾಯಿತಿಗಳಲ್ಲಿ ಉತ್ತಮ ಮಳೆತಾಗಿದ್ದು ಇದರಿಂದ ತುಂಗ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದೆ. ನಿನ್ನೆ ರಾತ್ರಿ 35 ಸಾವಿರ ಕ್ಯೈಸೆಕ್ ನೀರು ಹರಿಬರುತ್ತಿದ್ದು ಬೆಳಗಿನ ಜಾವದ ಸಮಯದಲ್ಲಿ ಮಳೆ ಕಡಿಮೆಯಾದ ಕಾರಣ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿತ್ತು.

ಈಗ ಮಳೆ ಹೆಚ್ಚಾದ ಕಾರಣ 40 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ತುಂಗ ನದಿಯ ಗಾಜನೂರು ಜಲಾಶಯದಲ್ಲಿ 21 ಗೇಟು ತೆರೆದು ಹರಿಬಿಡಲಾಗುತ್ತಿದೆ.

ಅದರಂತೆ ಭದ್ರೆಯ ಒಖಹರಿವು ಹೆಚ್ಚಳವಾಗಿದೆ. 186 ಅಡಿ ಎತ್ತರದ ಜಲಾಶಯದಲ್ಲಿ ಪ್ರಸ್ತುತ 145ಅಡಿ ನೀರು ಸಂಗ್ರಹವಾಗಿದೆ. 12165 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇಷ್ಟು ಹೊತ್ತಿಗೆ ಭದ್ರ ಡ್ಯಾಂ ತುಂಬಿ ಗೇಟ್ ಓಪನ್ ಮಾಡಲಾಗಿತ್ತು. 184 ಅಡಿ ನೀರು ಸಂಗ್ರಹವಾಗಿತ್ತು. ಜು.18, 2022 ರಂದು ಜಲಾಶಯದಿಂದ ನದಿಗೆ ನೀರು ಹರಿಸಲಸಗಿತ್ತು.

ಅದರಂತೆ ಲಿಂಗನ ಮಕ್ಕಿ ಜಲಾಶಯದಲ್ಲಿ 52,374 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 1819 ಅಡಿ ಎತ್ತರದ ಜಲಾಶಯದಲ್ಲಿ ಸಧ್ಯಕ್ಕೆ 1770.70 ಅಡಿ ನೀರು ಸಂಗ್ರಹವಾಗಿದೆ. ನಿನ್ನೆ 1767.30 ಅಡಿ ನೀರು ಸಂಗ್ರಹವಾಗಿತ್ತು. ಒಳಹರಿವು ಹೆಚ್ಚಳದಿಂದ ಮೂರು ಅಡಿ ಹೆಚ್ಚಳವಾಗಿದೆ. ಕಳೆದ ವರ್ಷ ಈ ದಿನ 1797 ಅಡಿ ನೀರು ಸಂಗ್ರಹವಾಗಿದೆ.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

58 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago