News Karnataka Kannada
Thursday, May 02 2024
ಶಿವಮೊಗ್ಗ

ಲೋಕಸಭಾ ಅಖಾಡದಿಂದ ಕೆ.ಎಸ್. ಈಶ್ವರಪ್ಪ ಹಿಂದಕ್ಕೆ

Kc Eshwra
Photo Credit : NewsKarnataka

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ಅಖಾಡದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡಕ್ಕೆ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರೇ ಎಂಟ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೆ.ಎಸ್ ಈಶ್ವರಪ್ಪ ಇವತ್ತು ತುರ್ತು ಸುದ್ದಿಗೋಷ್ಟಿ ಕರೆದು ಮಹತ್ವದ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಡರಾತ್ರಿ ರಾಜ್ಯಕ್ಕೆ ಆಗಮಿಸಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರದ ಬಗ್ಗೆ ನಾಯಕರ ಜೊತೆ ಚರ್ಚೆ ನಡೆಸುತ್ತಿರುವ ಅಮಿತ್ ಶಾ ಅವರು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಜೊತೆಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ತನ್ನ ಮಗನಿಗೆ ಟಿಕೆಟ್ ಸಿಗಲಿಲ್ಲ ಎಂದು ಕೋಪಗೊಂಡಿದ್ದ ಈಶ್ವರಪ್ಪನವರು ಅಮಿತ್ ಶಾ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ದೂರವಾಣಿಯಲ್ಲಿ ಅಮಿತ್ ಶಾ ಕೊಟ್ಟಿರುವ ಭರವಸೆಯನ್ನು ಈಶ್ವರಪ್ಪ ಒಪ್ಪಿಕೊಂಡಿದ್ದು, ಯಡಿಯೂರಪ್ಪ ಪುತ್ರನ ವಿರುದ್ಧ ಚುನಾವಣಾ ಕಣದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು