ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ಬಿ.ವೈ ರಾಘವೇಂದ್ರನನ್ನ ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದಿದ್ದಾರೆ.