ಶಿವಮೊಗ್ಗ: ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಮಲ್ಲೇಶ್ (35) ಎಂದು ಗುರುತಿಸಲಾಗಿದೆ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂದಿನ ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.